ದೇಶಶಾಹೀನ್ ಬಾಗ್ ಎಫೆಕ್ಟ್? ಶೇ. 80 ರಷ್ಟು ಮತ ಗಳಿಸಿದ ಅಮಾನತುಲ್ಲಾ ಖಾನ್
ದೆಹಲಿ ವಿಧಾನಸಭೆ ಚುನಾವಣೆ ವೇಳೆ ಅತಿ ಹೆಚ್ಚು ಸುದ್ದಿ ಮಾಡಿದ ಶಾಹೀನ್ ಬಾಗ್, ಓಕ್ಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಮಾನತುಲ್ಲಾ ಖಾನ್ ಅವರು ಶೇ.80 ರಷ್ಟು ಮತ ಗಳಿಸುವ ಮೂಲಕ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.