Delta Plus

ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣು ತನಿಖೆ ತೀವ್ರ: ಬ್ರಿಟನ್ ನಲ್ಲಿ ಪ್ರಕರಣಗಳ ಹೆಚ್ಚಳ
ಡೆಲ್ಟಾ ವೈರಾಣುವಿಗಿಂತ ಡೆಲ್ಟಾ ಪ್ಲಸ್ ವೈರಾಣು ಅತಿ ವೇಗವಾಗಿ ಹರಡುತ್ತಿರುವುದು ಗಮನಕ್ಕೆ ಬಂದಿದ್ದು, ಆರೋಗ್ಯ ಸಿಬ್ಬಂದಿ ಎಚ್ಚರ ವಹಿಸಿದ್ದಾರೆ. ಇದೇ ವೇಳೆ ಆರೋಗ್ಯಾಧಿಕಾರಿಗಳು ಕೊರೊನಾ ಸಾಂಕ್ರಾಮಿಕ ಇನ್ನೂ ಕೊನೆಗೊಂಡಿಲ್ಲ ಎಂದು ಎಚ್ಚರಿಕೆ ನೀಡುತ್ತಿದ್ದಾರೆ.

ಕೋವಾಕ್ಸಿನ್ ಗೆ ಕೋವಿಡ್-19 ರೂಪಾಂತರ ಡೆಲ್ಟಾ ಪ್ಲಸ್ ತಡೆಯುವ ಸಾಮರ್ಥ್ಯವಿದೆ- ಐಸಿಎಂಆರ್ ಅಧ್ಯಯನ
ಸ್ವದೇಶಿ ನಿರ್ಮಿತ ಕೋವಾಕ್ಸಿನ್ ಲಸಿಕೆಗೆ ಕೋವಿಡ್-19 ರೂಪಾಂತರ ಡೆಲ್ಟಾ ಪ್ಲಸ್ ತಡೆಯುವ ಸಾಮರ್ಥ್ಯ ಇರುವುದು ಐಸಿಎಂಆರ್ ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ.

ನಗರದಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆ; ಕೋವಿಡ್ ನಿಯಮ ಪಾಲಿಸಿ, ಆತಂಕ ಬೇಡ: ಗೌರವ್ ಗುಪ್ತಾ
ಕೋವಿಡ್ ರೂಪಾಂತರ ತಳಿಗಳಾದ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಸೋಂಕಿಗೆ ಜನತೆ ಹೆದರುವ ಅವಶ್ಯಕತೆ ಇಲ್ಲ. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಡನೆ ಮಾಡಿದರೆ, ಯಾವುದೇ ಸೋಂಕು ನಮಗೆ ತಗಲುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ.

ಡೆಲ್ಟಾ ಪ್ಲಸ್ ಭೀತಿ: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ಅಥವಾ ಎರಡು ಡೋಸ್ ಲಸಿಕೆ ಕಡ್ಡಾಯ
ಕೇರಳದ ಕೆಲ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವರದಿಯಾಗಿರುವ ಹಿನ್ನೆಲೆಯಲ್ಲಿ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ಲಸಿಕೆ ಪರಿಣಾಮಕಾರಿತ್ವ ಮೇಲೆ ಡೆಲ್ಟಾ ಪ್ಲಸ್ ರೂಪಾಂತರಿಯ ವ್ಯತಿರಿಕ್ತ ಪರಿಣಾಮದ ಬಗ್ಗೆ ವೈಜ್ಞಾನಿಕ ಮಾಹಿತಿ ಇಲ್ಲ: ವಿ.ಕೆ. ಪೌಲ್
ಡೆಲ್ಟಾ ಪ್ಲಸ್ ರೂಪಾಂತರ ವೈರಾಣು ಬಗ್ಗೆ ಆತಂಕಗಳು ಹೆಚ್ಚಳವಾಗುತ್ತಿರುವ ಮಧ್ಯೆ, ಹೊಸ ರೂಪಾಂತರ ಹೆಚ್ಚಾಗಿ ಹರಡಬಲ್ಲದು ಅಥವಾ ಲಸಿಕೆ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ ಎಂಬುದರ ಬಗ್ಗೆ ಇಲ್ಲಿಯವರೆಗೂ ಯಾವುದೇ ವೈಜ್ಞಾನಿಕ ಮಾಹಿತಿಯಿಲ್ಲ ಎಂದು ಕೋವಿಡ್ ಕಾರ್ಯಪಡೆ ಮುಖ್ಯಸ್ಥ ವಿ. ಕೆ. ಪೌಲ್ ಹೇಳಿದ್ದಾರೆ.

ಹೊಸ ವೈರಾಣು ಪತ್ತೆಗೆ ಜೀನೋಮ್ ಸೀಕ್ವೆನ್ಸ್ ಈ ವರೆಗೆ 600 ಮಾದರಿಗಳು ಪರೀಕ್ಷೆಗೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೋವಿಡ್ ಹೊಸ ವೈರಾಣು ನಿಯಂತ್ರಣಕ್ಕೆ ಜೀನೋಮ್ ಸೀಕ್ವೆನ್ಸ್ ಮಾಡುತ್ತಿದ್ದು, 600 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಡೆಲ್ಟಾ ಪ್ಲಸ್ ಉಲ್ಬಣ: ರಾಜ್ಯದಲ್ಲಿ ಅವಸರದ ಅನ್ ಲಾಕ್ ಬೇಡ-ಸರ್ಕಾರಕ್ಕೆ ಸಲಹಾ ಸಮಿತಿ ಸೂಚನೆ
ಕೋವಿಡ್ ಡೆಲ್ಟಾ-ಪ್ಲಸ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ಮಹಾರಾಷ್ಟ್ರ ಅನ್ ಲಾಕ್ ನಿಂದಾಗಿ ರಾಜ್ಯದಲ್ಲಿ ಮತ್ತೆನಿಧಾನವಾಗಿ ಪರಿಸ್ಥಿತಿ ಗಂಭೀರವಾಗುತ್ತಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ತಾಂತ್ರಿಕ ಸಲಹಾ ಸಮಿತಿ (ಟಿಎಸಿ)ರಾಜ್ಯ ಸರ್ಕಾರ ತಕ್ಷಣ ತೆಗೆದುಕೊಳ್ಳಬೇಕಾದ ಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಲ್ಲದೆ ಅವಸರದಲ್ಲಿ ಲಾಕ್ ಡೌನ್ ಮಾನದಂಡಗಳನ್ನು ಸಡಿಲಿಸುವು

ರಾಜಸ್ತಾನ: ಎರಡೂ ಡೋಸ್ ಲಸಿಕೆ ಪಡೆದಿದ್ದ 65 ವರ್ಷದ ಮಹಿಳೆಗೆ ಡೆಲ್ಟಾ ಪ್ಲಸ್ ಕೊರೋನಾ ಪಾಸಿಟಿವ್
ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದ ಬಿಕಾನೆರ್ನ 65 ವರ್ಷದ ಮಹಿಳೆ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಕ್ಕೆ ತುತ್ತಾಗಿದ್ದಾರೆ.

ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರ ನಿಯಂತ್ರಣಕ್ಕೆ ತಕ್ಷಣ ಕ್ರಮಕೈಗೊಳ್ಳಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಸೂಚನೆ
ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರ ಪತ್ತೆಯಾದ ಜಿಲ್ಲೆಗಳಲ್ಲಿ ಗುಂಪು ಸೇರುವುದನ್ನು ತಡೆಗಟ್ಟುವುದು, ವ್ಯಾಪಕ ಪರೀಕ್ಷೆ ಮತ್ತು ಲಸಿಕೆ ವ್ಯಾಪ್ತಿಯನ್ನು ಆದ್ಯತೆಯ ಆಧಾರದ ಮೇಲೆ ಹೆಚ್ಚಿಸುವುದು ಸೇರಿದಂತೆ ತಕ್ಷಣದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಒತ್ತಾಯಿಸಿದೆ.

