Democracy

ವಿಪಕ್ಷಗಳು, ಪ್ರಜಾಪ್ರಭುತ್ವ ಮುಗಿಸಲು ಬಿಜೆಪಿ ಬಯಸುತ್ತಿದೆ: ಪ್ರಿಯಾಂಕಾ ಗಾಂಧಿ ಕಿಡಿ
ಆರ್ ಜೆಡಿ ನಾಯಕರಾದ ತೇಜಸ್ವಿ ಯಾದವ್ ಮತ್ತು ಮಿಸಾ ಭಾರತಿ ಅವರನ್ನು ತನಿಖಾ ಸಂಸ್ಥೆಗಳು ವಿಚಾರಣೆ ನಡೆಸುತ್ತಿರುವ ಬಗ್ಗೆ ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ವಿಪಕ್ಷಗಳು ಮತ್ತು ಪ್ರಜಾಪ್ರಭುತ್ವವನ್ನು ಮುಗಿಸಲು ಆಡಳಿತಾರೂಢ ಪಕ್ಷ ಬಯಸಿದೆ ಎಂದು ಕಿಡಿಕಾರಿದ್ದಾರೆ.

ವಿರೋಧ ಪಕ್ಷಗಳ ಪ್ರಮುಖ ಧ್ವನಿಗಳನ್ನು ಮೌನಗೊಳಿಸಲು ಕಾನೂನನ್ನು ಮಧ್ಯೆ ತರಬಾರದು: ಪಿ ಚಿದಂಬರಂ
ದೃಢವಾದ ರಾಜಕೀಯ ಭಾಷಣವು ಪ್ರಜಾಪ್ರಭುತ್ವದ ಮೂಲತತ್ವವಾಗಿದೆ ಮತ್ತು ಪ್ರತಿಪಕ್ಷಗಳ ಪ್ರಮುಖ ಧ್ವನಿಯನ್ನು ಮೌನಗೊಳಿಸಲು ಕಾನೂನನ್ನು ಮಧ್ಯೆ ತರಬಾರದು ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಕೇವಲ ಬಾಡಿಗೆದಾರ, ಪ್ರಜಾಪ್ರಭುತ್ವದ ಮಾಲೀಕರಲ್ಲ: ಕಾಂಗ್ರೆಸ್
ಆಡಳಿತಾರೂಢ ಬಿಜೆಪಿ ಕೇವಲ ಬಾಡಿಗೆದಾರ, ಪ್ರಜಾಪ್ರಭುತ್ವದ ಮಾಲೀಕರಲ್ಲ ಎಂದು ಮಂಗಳವಾರ ಹೇಳಿದೆ. ಅದಾನಿ ವಿಷಯದಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನಾಟಕವನ್ನು ಪುನರ್ ಆರಂಭಿಸಿದೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಹೇಳಿದ್ದಾರೆ.

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದ್ದು, ಹೀಗಾಗಿ ಅದರ ಮೇಲೆ ದಾಳಿ ನಡೆಸುತ್ತಿದ್ದಾರೆ: ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂಬ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ನೋವಾಗಿದೆ. ಹೀಗಾಗಿಯೇ ಅವರು ಅದರ ಮೇಲೆ ದಾಳಿ ನಡೆಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

ಅಪಾಯದಲ್ಲಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಪ್ರಜಾಪ್ರಭುತ್ವವಲ್ಲ; ರಾಹುಲ್ ಗಾಂಧಿ ವಿರುದ್ಧ ಜೆಪಿ ನಡ್ಡಾ ಕಿಡಿ
ಲಂಡನ್ ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಪ್ರಜಾಪ್ರಭುತ್ವ ರಕ್ಷಣೆಗೆ ವಿದೇಶಿ ಶಕ್ತಿಗಳನ್ನು ರಾಹುಲ್ ಗಾಂಧಿ ಎಂದಿಗೂ ಒತ್ತಾಯಿಸಿಲ್ಲ- ಶಶಿ ತರೂರ್
ಭಾರತದಲ್ಲಿನ ಪ್ರಜಾಪ್ರಭುತ್ವ ಕುರಿತು ಲಂಡನ್ ನಲ್ಲಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಿರಂತರವಾಗಿ ಒತ್ತಾಯಿಸುತ್ತಿರುವಂತೆಯೇ, ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವ ರಕ್ಷಿಸುವಂತೆ ವಿದೇಶಿ ಶಕ್ತಿಯನ್ನು ರಾಹುಲ್ ಗಾಂಧಿ ಒತ್ತಾಯಿಸಿಲ್ಲ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.

ಲಂಡನ್'ನಲ್ಲಿ ರಾಹುಲ್ ಗಾಂಧಿ ಹೇಳಿಕೆ: ಸಂಸತ್ತಿನಲ್ಲಿ ಕೋಲಾಹಲ, ಮತ್ತೆ ಕಲಾಪ ಮುಂದೂಡಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬ್ರಿಟನ್ ಪ್ರವಾಸದಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ನೀಡಿದ್ದ ಹೇಳಿಕೆಯು ಸಂಸತ್ತಿನಲ್ಲಿ ಮಂಗಳವಾರವೂ ಕೋಲಾಹಲ ಎಬ್ಬಿಸಿದ್ದು, ಇದರ ಪರಿಣಾಮ ಲೋಕಸಭೆಯನ್ನು ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಲಾಯಿತು.

ವಿದೇಶಿ ನೆಲದಲ್ಲಿ ಭಾರತದ ಪ್ರಜಾಪ್ರಭುತ್ವ, ರಾಜಕೀಯ, ಸಂಸದೀಯ ವ್ಯವಸ್ಥೆಯನ್ನು ರಾಹುಲ್ ಗಾಂಧಿ ಅವಮಾನಿಸಿದ್ದಾರೆ: ಬಿಜೆಪಿ
ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಲಂಡನ್‌ನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಬಿಜೆಪಿ ಮಂಗಳವಾರ ತೀವ್ರವಾಗಿ ವಾಗ್ದಾಳಿ ನಡೆಸಿದೆ.

ಒಬ್ಬ ವ್ಯಕ್ತಿಯನ್ನು ದೇವರನ್ನಾಗಿ ಮಾಡಿದರೆ ಅದು ಪ್ರಜಾಪ್ರಭುತ್ವವಾಗಲ್ಲ, ಸರ್ವಾಧಿಕಾರವಾಗುತ್ತದೆ: ಮಲ್ಲಿಕಾರ್ಜುನ ಖರ್ಗೆ
ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯನ್ನು ದೇವರನ್ನಾಗಿ ಮಾಡಿದರೆ ಅದು ಪ್ರಜಾಪ್ರಭುತ್ವವಾಗುವುದಿಲ್ಲ, ಆದರೆ ಅದು ಸರ್ವಾಧಿಕಾರವಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭಾನುವಾರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಮಂದ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.

