ರಾಜ್ಯರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಖಾಸಗಿ ಆಸ್ಪತ್ರೆಗಳ ದುಬಾರಿ ಪರೀಕ್ಷಾ ಶುಲ್ಕಕ್ಕೆ ಕಡಿವಾಣ; ದರ ನಿಗದಿಪಡಿಸಿದ ಸರ್ಕಾರ
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್ ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.