Dengue

ಸಿಎಂ ವಿರುದ್ಧ 4 ಸಾವಿರ ಕೋಟಿ ರೂ ಭ್ರಷ್ಟಾಚಾರ ಆರೋಪ; ರಾಜ್ಯದಲ್ಲಿ ಡೆಂಗ್ಯು ಪ್ರಕರಣ, ಸಾವು ಹೆಚ್ಚಳ; 1 ಕೋಟಿ ಲೀಟರ್ ದಾಟಿದ KMF ಹಾಲು ಸಂಗ್ರಹ; ಶೀಘ್ರವೇ BBMP ಆಸ್ತಿ ತೆರಿಗೆ ಹೆಚ್ಚಳ

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಡೆತ್ ಆಡಿಟ್'ಗೆ ಆರೋಗ್ಯ ಇಲಾಖೆ ಮುಂದು!
ಖಾಸಗಿ ಆಸ್ಪತ್ರೆಯವರು ಕೂಡ ಡೆಂಗ್ಯೂ ಡೆತ್ ಗಳು ಹಾಗೂ ಪ್ರಕರಣಗಳನ್ನ ನೋಟಿಫೈ ಮಾಡಬೇಕು. ಯಾವುದೇ ಖಾಸಗಿ ಆಸ್ಪತ್ರೆಗೆ ಬರುವ ಡೆಂಗ್ಯೂ ಪ್ರಕರಣದ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಜೊತೆಗೆ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು.

ಚಿಕ್ಕಮಗಳೂರು: ಡೆಂಗ್ಯೂ ಸೋಂಕಿಗೆ ಆರು ವರ್ಷದ ಬಾಲಕಿ ಬಲಿ
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಸಾನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ: ಬೆಂಗಳೂರಲ್ಲಿ 27 ವರ್ಷದ ಯುವಕ ಸಾವು
ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾನೆ.

'ಸಮಗ್ರ ಮೈಕ್ರೋ ಪ್ಲಾನ್' ಮೂಲಕ ಡೆಂಗ್ಯೂ ನಿಯಂತ್ರಿಸಿ: ಅಧಿಕಾರಿಗಳಿಗೆ BBMP ಸೂಚನೆ
ನೀರಿನ ಸಂಪ್, ಡ್ರಮ್, ಕೊಳಾಯಿ ಬಳಿ, ಹೂವಿನ ಕುಂಡ ಸೇರಿದಂತೆ ಇನ್ನಿತರ ಕಡೆ ಪರಿಶೀಲಿಸಿ ವಾರಕ್ಕೊಮ್ಮೆ ಎಲ್ಲ ಕಡೆ ನೀರನ್ನು ಹೊರ ಹಾಕಿ ಒಣಗಿಸಿ ಮತ್ತೆ ಶುದ್ಧ ನೀರು ಸಂಗ್ರಹಿಸಿಕೊಳ್ಳಬೇಕು.

ಡೆಂಗ್ಯೂ ಪತ್ತೆ, ಚಿಕಿತ್ಸೆ ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದಲ್ಲಿ ಡೆಂಘಿ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು.

ನಗರದಲ್ಲಿ ಡೆಂಗ್ಯೂ ಹೆಚ್ಚಳ: 13 ದಿನಗಳಲ್ಲಿ 172 ಕೇಸ್ ಪತ್ತೆ, ಪ್ರತಿ ವಾರ್ಡ್‌ಗೆ 4 ಔಷಧ ಸಿಂಪಡಣೆ ತಂಡ ನಿಯೋಜನೆ!
ಮಳೆ ಆರಂಭವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗುತ್ತಿದ್ದು, ಮೇ 1ರಿಂದ 13ರವರೆಗೆ ಒಟ್ಟು 172 ಡೆಂಗೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮಳೆ ಬೆನ್ನಲ್ಲೇ ಡೆಂಗ್ಯೂ ಹೆಚ್ಚಳ: ರಾಜ್ಯದಲ್ಲಿ 2,800 ಕ್ಕೂ ಹೆಚ್ಚು ಕೇಸ್ ಗಳು ಪತ್ತೆ!
ಬಿಸಿಲ ಝಳದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ವರುಣರಾಯನ ಆಗಮನವಾಗಿದ್ದು, ಇದರ ಬೆನ್ನಲ್ಲೇ ಇದೀಗ ಡೆಂಗ್ಯೂ ಭೀತಿ ಶುರುವಾಗಿದೆ. ರಾಜ್ಯದಲ್ಲಿ ಮೇ.13ರವರೆಗೆ ಒಟ್ಟು 2,877 ಪ್ರಕರಣ ವರದಿಯಾಗಿವೆ.

ಚಿಕ್ಕಮಗಳೂರು: ಡೆಂಗ್ಯೂಗೆ ಕಾಲೇಜು ವಿದ್ಯಾರ್ಥಿನಿ ಬಲಿ!
ಚಿಕ್ಕಮಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

