detained

ಮೆಹಬೂಬಾ ಮುಫ್ತಿ ಬಿಡುಗಡೆಗೆ ರಾಹುಲ್ ಗಾಂಧಿ ಒತ್ತಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿರುವ ಪಿಡಿಪಿ ಮುಖಂಡೆ ಮೆಹಬೂಬಾ ಮುಫ್ತಿ ಅವರನ್ನು ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಒತ್ತಾಯಿಸಿದ್ದಾರೆ.

ಬೆಳಗಾವಿಗೆ ಮಹಾರಾಷ್ಟ್ರ ಸಚಿವ ಭೇಟಿ: ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆಯಲ್ಲಿ ಸಚಿವರ ಬಂಧನ, ಬಿಡುಗಡೆ
ಮಹಾರಾಷ್ಟ್ರ ಏಕೀಕರಣ ಸಮಿತಿಯು ಆಚರಿಸುವ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸುವ ಸಲುವಾಗಿ ಕಳ್ಳರಂತೆ ಬೆಳಗಾವಿಗೆ ಬಂದಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ್ ಯಡ್ರಾವಕರ್ ವಿರುದ್ಧ ವಿರೋಧಗಳು ವ್ಯಕ್ತವಾಗಿ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಚಿವರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ಪ್ರಧಾನಿ ವಿರುದ್ಧ ಪ್ರತಿಭಟನೆ: ಎಡ ಪಂಥೀಯ ವಿದ್ಯಾರ್ಥಿಗಳ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಬಂದರು ಬಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ ಎಡ ಪಂಥೀಯ ಸಂಘಟನೆಯ ವಿದ್ಯಾರ್ಥಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಗಾಂಜಾ ಮಾರಾಟ; ಒರಿಸ್ಸಾ ಮೂಲದ ಆರೋಪಿ ಸೆರೆ; 15 ಕೆ.ಜಿ.ಗಾಂಜಾ ವಶ
ಒರಿಸ್ಸಾದಿಂದ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಮಾರತ್‌ಹಳ್ಳಿ ಪೊಲೀಸರು ಆತನಿಂದ 5 ಲಕ್ಷ ರೂ. ಮೌಲ್ಯದ 15 ಕೆ.ಜಿ. ತೂಕದ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ: ಮುಖ್ಯಮಂತ್ರಿ ಆದಿತ್ಯನಾಥ್ ನಿವಾಸದ ಹೊರಗೆ ಧರಣಿ, ಸಾಮಾಜಿಕ ಹೋರಾಟಗಾರ್ತಿಯ ಬಂಧನ
ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೋರಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಅನು ದುಬೆ ಅವರನ್ನು ಪೊಲೀಸರು ಬಂಧಿಸಿದ್ದಾರೆ

ಅರೆ ಪ್ರತಿಭಟನೆ: ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿ ವಶಕ್ಕೆ ಪಡೆದ ಪೊಲೀಸರು
ಮುಂಬೈನ ಅರೆ ಕಾಲೋನಿಯಲ್ಲಿ ಮೆಟ್ರೋ ಕಾಮಗಾರಿಗಾಗಿ ಸಾವಿರಾರು ಮರಗಳನ್ನು ಕಡಿಯುವ ಬಿಎಂಸಿ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಶಿವಸೇನೆ ನಾಯಕಿ ಪ್ರಿಯಾಂಕಾ ಚತುರ್ವೇದಿಯವರನ್ನು ಶನಿವಾರ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಖ್ ಬಂಧನ: ಕಾಂಗ್ರೆಸ್ ಖಂಡನೆ
ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ದೇಶದ ಏಕತೆ ಹಾಗೂ ಸಮಗ್ರತೆಗಾಗಿ ಹೋರಾಡಿದ ಇಂತಹ ನಾಯಕರನ್ನು ಬಂಧಿಸಿರುವುದು ದುರದೃಷ್ಟ ಎಂದು ಕಾಂಗ್ರೆಸ್ ಹೇಳಿದೆ.

ಸಾರ್ವಜನಿಕ ಭದ್ರತಾ ಕಾಯ್ದೆಯಡಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಬಂಧನ
ಪ್ರಮುಖ ಬೆಳವಣಿಗೆಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಸೋಮವಾರ ಸಾರ್ವಜನಿಕ ಭದ್ರತಾ ಕಾಯ್ದೆ(ಪಿಎಸ್ಎ) ಅಡಿ ಬಂಧಿಸಲಾಗಿದೆ.

ಮಾಜಿ ಐಎಎಸ್ ಅಧಿಕಾರಿ, ಕಾಶ್ಮೀರಿ ರಾಜಕಾರಣಿ ಶಾ ಫೈಸಲ್ ದೆಹಲಿಯಲ್ಲಿ ಬಂಧನ
2009ನೇ ಸಾಲಿನ ಐಎಎಸ್ ಟಾಪರ್ ಹಾಗೂ ಜಮ್ಮು ಮತ್ತು ಕಾಶ್ಮೀರದ ರಾಜಕಾರಣಿ ಶಾ ಫೈಸಲ್ ಅವರನ್ನು ಬುಧವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

