ದೇಶಕಾಶ್ಮೀರ: ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ ಗೃಹ ಬಂಧನದಲ್ಲಿರುವ ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಮತ್ತೆ ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.