ಆರೋಗ್ಯಮಧುಮೇಹವನ್ನು ಗುಣಪಡಿಸಬಹುದಾ? ಡಯಾಬಿಟಿಕ್ ರಿವರ್ಸಲ್ ಬಗ್ಗೆ ನಿಮಗೆಷ್ಟು ಗೊತ್ತು?
ಮನುಷ್ಯನನ್ನು ಹೆಚ್ಚು ಬಾಧಿಸುವ ಕಾಯಿಲೆಗಳಲ್ಲಿ ಮಧುಮೇಹ ಕೂಡ ಒಂದು. ಮಧುಮೇಹವನ್ನು ಸಕ್ಕರೆ ಕಾಯಿಲೆ ಎಂದು ಕರೆಯಲಾಗುತ್ತದೆ. ಒಮ್ಮೆ ಈ ಕಾಯಿಲೆ ಆರಂಭವಾದರೆ ಜೀವನಪರ್ಯಂತ ಔಷಧ ತೆಗೆದುಕೊಳ್ಳಲೇಬೇಕೆಂದು ಹೇಳಲಾಗುತ್ತಿದೆ. ಔಷಧ ಸೇವನೆ ಇಲ್ಲದೇ ಮಧುಮೇಹವನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಸಾರ್ವತ್ರಿಕವಾಗಿದೆ.