died

ಚಿತ್ರದುರ್ಗ: ಆಶ್ರಮದ ಸಂಪಿನಲ್ಲಿ ತಾಯಿ, ಮಗಳ ಶವ ಪತ್ತೆ!
ನಗರದ ತಿಪ್ಪೇರುದ್ರಸ್ವಾಮಿ ಆಶ್ರಮದಲ್ಲಿ ಸಂಪಿಯಲ್ಲಿ ತಾಯಿ ಮತ್ತು ಮಗಳ ಶವ ಪತ್ತೆಯಾಗಿದೆ. ಮೃತರನ್ನು ಭದ್ರಾವತಿಯ ಗೀತಾ (40) ಹಾಗೂ ಪ್ರಿಯಾಂಕಾ (22) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಮಂಗನ ಕಾಯಿಲೆಗೆ ಮತ್ತೊಂದು ಬಲಿ, ಚಿಕಿತ್ಸೆ ಫಲಿಸದೆ ವೃದ್ಧೆ ಸಾವು
ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಲಂಡನ್ ನಲ್ಲಿ ಟ್ರಕ್ ಹರಿದು ಭಾರತದ PhD ವಿದ್ಯಾರ್ಥಿನಿ ಸಾವು
ಸೈಕಲ್ ತುಳಿಯುತ್ತ ಮನೆಗೆ ಹಿಂತಿರುಗುತ್ತಿದ್ದ ವೇಳೆ ಟ್ರಕ್ ಹರಿದು 33 ವರ್ಷದ ಚೆಯಿಸ್ತಾ ಕೊಚ್ಚಾರ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್ 19ರಂದು ಅಪಘಾತ ಸಂಭವಿಸಿದೆ.

ಶಿವಮೊಗ್ಗ: ರಸ್ತೆ ಅಪಘಾತ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ಸಾವು
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಹಾಸ್ಟೆಲ್ ಮಹಡಿಯಿಂದ ಬಿದ್ದು ಬಿ-ಟೆಕ್ ವಿದ್ಯಾರ್ಥಿ ನಿಗೂಢ ಸಾವು!
ಹಾಸ್ಟೆಲ್ ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಹಾಸ್ಟೆಲ್ ನಲ್ಲಿ ನಡೆದಿದೆ.

ಮಹಾಶಿವರಾತ್ರಿ ದಿನವೇ ಶಿವೈಕ್ಯಳಾದ 'ಲತಾ': ಹೃದಯಾಘಾತದಿಂದ ಧರ್ಮಸ್ಥಳದ ಆನೆ ವಿಧಿವಶ!
ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ.

ತ್ರಿಪುರಾ: ಮಾಜಿ ಮಿಸ್ ಇಂಡಿಯಾ ಕ್ಯಾನ್ಸರ್ ಗೆ ಬಲಿ; 28 ವರ್ಷಕ್ಕೆ ಇಹಲೋಕ ತ್ಯಜಿಸಿದ ರಿಂಕಿ ಚಕ್ಮಾ
ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತ್ರಿಪುರಾ ಮೂಲದ ಮಾಜಿ ಮಿಸ್ ಇಂಡಿಯಾ ತಾರೆ ರಿಂಕಿ ಚಕ್ಮಾ (28) ನಿಧನರಾಗಿದ್ದಾರೆ.

ತಮಿಳುನಾಡು: ಬೀದಿ ಕಾಮಣ್ಣರಿಂದ ತಪ್ಪಿಸಿಕೊಳ್ಳಲು ಓಡಿಹೋಗುತ್ತಿದ್ದ ಯುವತಿ ಕಾರಿಗೆ ಸಿಲುಕಿ ಸಾವು!
ತನ್ನೊಡನೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗಳಿಂದ ತಪ್ಪಿಸಿಕೊಳ್ಳಲು ಓಡಿಹೋಗಲು ಯತ್ನಿಸುತ್ತಿದ್ದ ವೇಳೆ 20 ವರ್ಷದ ಯುವತಿ ಕಾರಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚೆನ್ನೈನ ತಿರುವಣ್ಣಾಮಲೈ ನಲ್ಲಿ ನಡೆದಿದೆ.

ತೆಲಂಗಾಣದಲ್ಲಿ ಭೀಕರ ಅಪಘಾತ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು; ಬಿಆರ್ ಎಸ್ ಶಾಸಕಿ ಲಾಸ್ಯ ನಂದಿತಾ ಸಾವು
ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಸಿಕಂದರಾಬಾದ್ ಕಂಟೋನ್ಮೆಂಟ್ ಕ್ಷೇತ್ರದ ಬಿಆರ್ ಎಸ್ ಶಾಸಕಿ ಜಿ.ಲಾಸ್ಯ ನಂದಿತಾ (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

