Dies

ಹಿರಿಯ ನಟಿ ಅಂಜನಾ ಭೌಮಿಕ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಅಂಜನಾ ಭೌಮಿಕ್ ಅವರು ಶನಿವಾರ ಕೋಲ್ಕತ್ತಾದಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಬೆಂಗಳೂರು: ಪ್ರೀಸ್ಕೂಲ್ ಕಟ್ಟಡದಿಂದ ಬಿದಿದ್ದ ನಾಲ್ಕು ವರ್ಷದ ಮಗು ಸಾವು!
ಫ್ರಿಸ್ಕೂಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೆಳ್ಳೆಕೆರೆಯಲ್ಲಿ ನಡೆದಿದೆ. ಜನವರಿ 22 ರಂದು ಆಟವಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಗಿಯನ್ನಾ ಆನ್ ಜಿಟೊವನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರು: ದೈವ ನರ್ತನ ವೇಳೆ ಹೃದಯಾಘಾತವಾಗಿ ಖ್ಯಾತ ದೈವ ನರ್ತಕ ಸಾವು
ದೈವ ನರ್ತನದ ಹೃದಯಾಘಾತವಾಗಿ ದೈವ ನರ್ತನರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ.

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ನಮೀಬಿಯಾ ಚಿರತೆ ಸಾವು
ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚಿರತೆ ಸಾವನ್ನಪ್ಪಿದೆ. ನಮೀಬಿಯಾದ ಚಿರತೆ ಶೌರ್ಯ ಇಂದು ಮಧ್ಯಾಹ್ನ 3:17 ರ ಸುಮಾರಿಗೆ ಸಾವನ್ನಪ್ಪಿರುವುದಾಗಿ ಹುಲಿ ಯೋಜನೆ ನಿರ್ದೇಶಕರು ತಿಳಿಸಿದ್ದಾರೆ.

ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪ್ರಾಸ್ಟೇಟ್ ಕ್ಯಾನ್ಸರ್ ನಿಂದಾಗಿ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಸ್ತಾದ್ ರಶೀದ್ ಖಾನ್ ಇಂದು ಮಧ್ಯಾಹ್ನ ನಿಧನ ರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಉಪನ್ಯಾಸ ನೀಡುವಾಗಲೇ ಹೃದಯಘಾತದಿಂದ ಕಾನ್ಪುರ ಐಐಟಿ ಪ್ರೊಫೆಸರ್ ಸಾವು!
ಐಐಟಿ-ಕಾನ್ಪುರದ 53 ವರ್ಷದ ಹಿರಿಯ ಪ್ರಾಧ್ಯಾಪಕರೊಬ್ಬರು ಹಳೆ ವಿದ್ಯಾರ್ಥಿಗಳ ಸಭೆಯೊಂದರಲ್ಲಿ ಉಪನ್ಯಾಸ ನೀಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸಂಸ್ಥೆಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಉಮೇಶ್ ಪಾಲ್ ಹತ್ಯೆ ಆರೋಪಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವು
ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಕೊಲೆಯಾದ ಗ್ಯಾಂಗ್ ಸ್ಟರ್- ರಾಜಕಾರಣಿ ಅತೀಕ್ ಅಹ್ಮದ್ ಅವರ ಸಹಾಯಕ ನಫೀಸ್ ಬಿರಿಯಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವು
ಕೇರಳದ ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 12 ವರ್ಷದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿತುಬಿದ್ದು ಸಾವನ್ಪನ್ನಪ್ಪಿದ ಘಟನೆ ನಡೆದಿದೆ.

ಹೃದಯಾಘಾತ: ಬಾಲಿವುಡ್ ಹಿರಿಯ ಚಿತ್ರ ನಿರ್ದೇಶಕ ರಾಜ್ ಕುಮಾರ್ ಕೊಹ್ಲಿ ನಿಧನ
ಬಾಲಿವುಡ್ ಹಿರಿಯ ಚಿತ್ರ ನಿರ್ದೇಶಕ ರಾಜ್ ಕುಮಾರ್ ಕೊಹ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

