ರಾಜ್ಯದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ವ್ಯಕ್ತಿ!
ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಕೊಂದಿರುವ ದಾರುಣ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿಯ ಬಿದಲೂರು ಗ್ರಾಮದ ನಿವಾಸಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಕವನಾ ಎಂದು ಗುರುತಿಸಲಾಗಿದೆ.