ರಾಜ್ಯವಾಹನ ಸವಾರರಿಗೆ ಗುಡ್ ನ್ಯೂಸ್: ಚಾಲಕರು ಇನ್ಮುಂದೆ ಡಿಎಲ್, ಆರ್'ಸಿ ಬುಕ್ ತೆಗೆದುಕೊಂಡು ಹೋಗಬೇಕಿಲ್ಲ; ಡಿಜಿಟಲ್ ದಾಖಲೆ ಸಾಕು!
ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು, ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರ್ಕಾರ ಅವಕಾಶ ನೀಡಿದೆ.