Dinesh Gundu Rao

ಸೆಪ್ಟೆಂಬರ್ ವರೆಗೆ ಡೆಂಗ್ಯೂ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು: ರಾಜ್ಯ ಸರ್ಕಾರ
ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದರೆ ಅದನ್ನು ಹಾಟ್ ಸ್ಪಾಟ್ ಎಂದು ಘೋಷಣೆ ಮಾಡಲಾಗುವುದು. ಅಲ್ಲದೆ, ಅಂತಹ ಪ್ರದೇಶದಲ್ಲಿ ಹೆಚ್ಚಿನ ಡೆಂಗ್ಯೂ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ.

ಹೆಣ್ಣು ಭ್ರೂಣ ಹತ್ಯೆ: ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್
ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ದಿನೇಶ್ ಗುಂಡೂರಾವ್, ಅಂತಹ ಪ್ರಕರಣಗಳನ್ನು ಗರ್ಭಧಾರಣೆಯ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳ(PCPNDT)ಕಾಯ್ದೆ ಅಡಿಯಲ್ಲಿ ದಾಖಲಿಸಲು ತಮ್ಮ ಇಲಾಖೆಯು ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಲಿದೆ ಎಂದು ಹೇಳಿದರು.

2030ರ ವೇಳೆಗೆ ಹಾವು ಕಡಿತದ ಸಾವು, ಅಂಗವೈಕಲ್ಯ ಕಡಿಮೆ ಮಾಡಲು ಸರ್ಕಾರ ಮುಂದು!
ಕರ್ನಾಟಕದಲ್ಲಿ 2024ರಲ್ಲಿ 36 ಸಾವುಗಳು ಹಾವು ಕಡಿತದಿಂದ ಸಂಭವಿಸಿದ್ದು, ಹಾವು ಕಡಿತದ ಪ್ರಕರಣಗಳು ಮತ್ತು ಸಾವುಗಳನ್ನು ‘ಅಧಿಸೂಚಿತ ರೋಗಗಳು’ ಎಂದು ಘೋಷಿಸಲಾಗಿದೆ.

ಬೆಂಗಳೂರು: ಡೆಂಗ್ಯೂ ಹೆಚ್ಚಿರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ಸ್ಥಾಪನೆಗೆ ಸರ್ಕಾರ ಮುಂದು!
ಆರಂಭದಲ್ಲಿಯೇ ಡೆಂಗ್ಯೂ ಪತ್ತೆ ಹಚ್ಚಿದರೆ ಗುಣಪಡಿಸಲು ಸಾಧ್ಯವಿದೆ. ಒಂದು ವೇಳೆ ವಿಳಂಬವಾದರೆ ಸಾವುಗಳು ಸಂಭವಿಸಲಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು.

ರಾಜ್ಯದಲ್ಲಿ ಡೆಂಗ್ಯೂ ಆರ್ಭಟ: ಖಾಸಗಿ ಆಸ್ಪತ್ರೆಗಳ ದುಬಾರಿ ಪರೀಕ್ಷಾ ಶುಲ್ಕಕ್ಕೆ ಕಡಿವಾಣ; ದರ ನಿಗದಿಪಡಿಸಿದ ಸರ್ಕಾರ
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಕೂಡ ಮನಬಂದಂತೆ ಡೆಂಗ್ಯೂ ಟೆಸ್ಟಿಂಗ್ ಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ನಕಲಿ ವೈದ್ಯಕೀಯ ಹಾವಳಿ ವಿರುದ್ಧ ಕಠಿಣ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಇನ್ಮುಂದೆ ಕಡ್ಡಾಯ!
ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ.

ದಿನೇಶ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆʼ ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಎರಡು ಪ್ರತ್ಯೇಕ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ತನಿಖೆಗೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದೇಶ!
ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ.

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ FIR
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

