Dinesh Gundu Rao

ಕರಾವಳಿ ಕರ್ನಾಟಕದಿಂದ ಬದಲಾವಣೆಯ ಅಲೆ ಆರಂಭವಾಗಲಿದೆ: ದಿನೇಶ್ ಗುಂಡೂರಾವ್
ರಾಜ್ಯ ರಾಜಕೀಯ ಬದಲಾವಣೆಯ ಅಲೆ ಕರಾವಳಿಯಿಂದಲೇ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಹೇಳಿದರು.

ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ದೂರು
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರು ಭಾನುವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!
ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಕೇಸರಿ ಭಯೋತ್ಪಾದನೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಜ್ಞಾನಿ ಕಾಂಗ್ರೆಸ್ ನಾಯಕರಿಗೆ ಸಾಕ್ಷಿಯನ್ನು ಪ್ರಶ್ನಿಸುವುದು ಮತ್ತು ಆರೋಪಿಯನ್ನು ಪ್ರಶ್ನಿಸುವ ವ್ಯತ್ಯಾಸ ತಿಳಿದಿಲ್ಲ ಎಂದು ತಿರುಗೇಟು ಕೊಟ್ಟ ಬಿಜೆಪಿ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಗ್ಯ ಇಲಾಖೆ ಶಾಮೀಲು; ದಿನೇಶ್ ಗುಂಡೂರಾವ್ ವಿರುದ್ಧ ಆರ್ ಅಶೋಕ ವಾಗ್ದಾಳಿ
ಹೆಣ್ಣು ಭ್ರೂಣ ಹತ್ಯೆ ಪ್ರಕರಣವನ್ನು ಮುಚ್ಚಿ ಹಾಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿ ಬಿಜೆಪಿಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
ಬೆಂಗಳೂರಿನ ಬಿಇಎಲ್ ಲೇಔಟ್ ಬಳಿ ಹೊಸದಾಗಿ ಆರಂಭಿಸಲಾಗಿರುವ ಸುಕೂನ್ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಚಾಲನೆ ನೀಡಿದರು.

ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಲರ್ ಕಾಟನ್ ಕ್ಯಾಂಡಿ ಬ್ಯಾನ್; ಗೋಬಿ ಮಂಚೂರಿಗೆ ಕೃತಕ ಬಣ್ಣ ಬಳಸುವಂತಿಲ್ಲ; ಉಲ್ಲಂಘಿಸಿದರೆ 10 ಲಕ್ಷ ರು. ದಂಡ, 7 ವರ್ಷ ಶಿಕ್ಷೆ!
ಕರ್ನಾಟಕದಲ್ಲಿ ಕಲರ್ ಕಾಟನ್ ಕ್ಯಾಂಡಿ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ. ಜೊತೆಗೆ ಗೋಬಿ ಮಂಚೂರಿ ತಯಾರಿಸುವಾಗ ಕೃತಕ ಬಣ್ಣ ಬಳಸುವುದನ್ನು ಕೂಡ ನಿಷೇಧಿಸಿ ಸರ್ಕಾರ ಆದೇಶಿಸಿದೆ.

ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮತ್ತು ಲಸಿಕಾ ಕಾರ್ಯಕ್ರಮಕ್ಕೆ ಸರ್ಕಾರ ಒತ್ತು ನೀಡಲಿದೆ: ದಿನೇಶ್ ಗುಂಡೂರಾವ್
ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಡೆಗಟ್ಟಬಹುದಾದ ಸಾವುಗಳನ್ನು ತಡೆಯಲು ಲಸಿಕಾ ಕಾರ್ಯಕ್ರಮಕ್ಕೆ ಒತ್ತು ನೀಡಲು ಕರ್ನಾಟಕ ಸರ್ಕಾರವು ಖಾಸಗಿ ವಲಯ ಸೇರಿದಂತೆ ಆರೋಗ್ಯ ರಕ್ಷಣೆಯ ಪಾಲುದಾರರೊಂದಿಗೆ ಸಹಕರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿಯೇ 2ನೇ ಸ್ಥಾನ: ಸಿಎಂ ಸಿದ್ದರಾಮಯ್ಯ
ಅಂಗಾಂಗ ದಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ದಾನಿಗಳ ಕುಟುಂಬಕ್ಕೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಅಂಗಾಂಗ ದಾನಿಗಳ ಪರ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

