Dinesh Gundu Rao

ಕೊರೋನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಸಾವು; ದೇಶದಲ್ಲಿ 20 ಜೆಎನ್1 ಕೇಸ್ ದಾಖಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕೊರೊನಾ ವೈರಸ್ನ ಜೆಎನ್ 1 (Coronavirus JN.1) ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಐದು ದಿನಗಳ ಹಿಂದೆ ಮೃತಪಟ್ಟಿದ್ದಾರೆ.

ನ್ಯುಮೋನಿಯಾ, ಶಿಶು ಮರಣ ತಗ್ಗಿಸಲು ಕ್ರಮ: ತಾಯಂದಿರ ಹಾಲಿನ ಬ್ಯಾಂಕ್ ಕಾರ್ಯಕ್ರಮಕ್ಕೆ ಚಾಲನೆ
ಮಕ್ಕಳಿಗೆ ಸೂಕ್ತವಾದ ಪೌಷ್ಟಿಕಾಂಶವನ್ನು ಖಚಿತಪಡಿಸಿಕೊಳ್ಳಲು ಮತ್ತು ಶಿಶು ಮರಣ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು.

ರಾಜ್ಯದಲ್ಲಿ ಹೆಣ್ಣು ಭ್ರೂಣಹತ್ಯೆ ತಡೆಗೆ ಸದ್ಯದಲ್ಲಿಯೇ ನೂತನ ನೀತಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕರ್ನಾಟಕದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾರಿಯಲ್ಲಿರುವ ಕಾನೂನು ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯದಲ್ಲಿ ಶೀಘ್ರವೇ ಹೊಸ ನೀತಿ ರೂಪಿಸಲಾಗುವುದು ಎಂದು ತಿಳಿಸಿದರು.

ಇನ್ನೂ 50 ಡಯಾಲಿಸಿಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ಮುಂದು!
ಡಯಾಲಿಸಿಸ್ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೇವಾ ಏಜೆನ್ಸಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಹಿಂದಿನ ಏಜೆನ್ಸಿಗಳ ಒಪ್ಪಂದದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಏಜೆನ್ಸಿಗಳನ್ನು ನೇಮಿಸಲು ಸರ್ಕಾರ ಹೊಸ ಟೆಂಡರ್‌ಗಳನ್ನು ಕರೆದಿದೆ ಎಂದರು.

ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ, ಇಬ್ಬರು ಅಧಿಕಾರಿಗಳ ಅಮಾನತು- ದಿನೇಶ್ ಗುಂಡೂರಾವ್
ಭ್ರೂಣ ಹತ್ಯೆ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸಿ ಮಂಡ್ಯದಲ್ಲಿನ ಭ್ರೂಣ ಹತ್ಯೆ ಪ್ರಕರಣವನ್ನು 'ಸಿಐಡಿ' ತನಿಖೆಗೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೆಣ್ಣು ಭ್ರೂಣಹತ್ಯೆ ದಂಧೆ: ಗರ್ಭಿಣಿ ಮಹಿಳೆಯರ ನೋಂದಣಿ, ನಿರಂತರ ಪರಿಶೀಲನೆಗೆ ಕ್ರಮ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಪ್ರಕರಣಗಳು ನಡೆದಿರುವುದು ಅಪಮಾನಕರ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸ್ವಯಂ-ಚಿಕಿತ್ಸೆ ನಿಲ್ಲಿಸಿ: ಜನತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯ ವ್ಯಾಪಿ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ(ಎಂಎಂಆರ್) ಅನಗತ್ಯವಾಗಿ ಬಳಕೆ ಮಾಡುತ್ತಿದ್ದು, ಇಂದು ಗಂಭೀರ ವಿಚಾರವಾಗಿದೆ. ಇದರಿಂದ ಸಾರ್ವಜನಿಕ ಆರೋಗ್ಯ ಏರುಪೇರಾಗುತ್ತಿದೆ. ಜನರು ಸ್ವಯಂ ಚಿಕಿತ್ಸೆ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.

ಬಲಿಷ್ಠ ಕಾಂಗ್ರೆಸ್ ತೆಲಂಗಾಣ ರಾಜ್ಯಕ್ಕೆ ಲಾಭದಾಯಕ: ಸಚಿವ ದಿನೇಶ್ ಗುಂಡೂರಾವ್
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕರ್ನಾಟಕದ ಸಚಿವ ದಿನೇಶ್ ಗುಂಡೂರಾವ್ ಅವರು, ಬಲಿಷ್ಠವಾದ ಕಾಂಗ್ರೆಸ್ ದೇಶ ಮತ್ತು ತೆಲಂಗಾಣಕ್ಕೆ ಲಾಭದಾಯಕ ಎಂದು ಮಂಗಳವಾರ ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್‌ವೈ ಮಗ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ, ಇದ್ಯಾವ ರಾಜಕಾರಣ ಮೋದಿಯವರೆ?
ಕುಟುಂಬ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿಯವರು ಅವಕಾಶ ಸಿಕ್ಕಾಗಲೆಲ್ಲಾ ಮಾತಾಡುತ್ತಾರೆ. ಆದರೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಗ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಇದ್ಯಾವ ರಾಜಕಾರಣ ಮೋದಿಯವರೆ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ.

