Dinesh Gundu Rao

ಬಿಜೆಪಿ ಚಾರ್ಜ್ ಶೀಟ್ ರಿಲೀಸ್: ಇದು ಕಳ್ಳರೇ ಪೊಲೀಸರ ವಿರುದ್ಧ ತನಿಖೆ ಮಾಡಿದಂತೆ- ಸಚಿವ ಗುಂಡೂರಾವ್ ಲೇವಡಿ
ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್ಶೀಟ್ ಬಿಡುಗಡೆಗೊಳಿಸಲಿದ್ದೇವೆಂಬ ಬಿಜೆಪಿ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಲೇವಡಿ ಮಾಡಿದ್ದಾರೆ.

ಹೃದಯಾಘಾತ ತಡೆಗೆ, ಪುನೀತ್ ಹೆಸರಲ್ಲಿ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಹಠಾತ್ ಹೃದಯಾಘಾತಗಳಿಗೆ ತಡೆ ಹಾಕಿ ಸೂಕ್ತ ಚಿಕಿತ್ಸೆ ಒದಗಿಸಲು ಕರ್ನಾಟಕ ರತ್ನ ಪುನೀತ್ರಾಜ್ಕುಮಾರ್ ಹೆಸರಿನಲ್ಲಿ ಯೋಜನೆಯೊಂದನ್ನು ಜಾರಿ ಮಾಡಲು ಸರ್ಕಾರ ಮುಂದಾಗಿದೆ.

ಮಾನಸಿಕ ಆರೋಗ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಆರೋಗ್ಯಕ್ಕೆ ನೀಡುವ ಮಹತ್ವವನ್ನ ಮಾನಸಿಕ ಆರೋಗ್ಯಕ್ಕೂ ನೀಡುವ ಅಗತ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದರು.

ಬೆಂಗಳೂರು: ಶೇ.25 ರಷ್ಟು 'ನಮ್ಮ ಕ್ಲಿನಿಕ್' ಗಳಲ್ಲಿ ರಾತ್ರಿ 8ರವರೆಗೆ ಸೇವೆ
ರಾಜ್ಯಾದ್ಯಂತ ಸದ್ಯ ಚಾಲ್ತಿಯಲ್ಲಿರುವ ನಮ್ಮ ಕ್ಲಿನಿಕ್ಗಳನ್ನು ನಂಬರ್ 1 ಕ್ಲಿನಿಕ್ಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ, ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್’ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ.

'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ.

ಚಿತ್ರದುರ್ಗದ ಕವಾಡಿಗರಹಟ್ಟಿಗೆ ಆರೋಗ್ಯ ಸಚಿವ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ
ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಸರ್ಕಾರ ವತಿಯಿಂದ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಿದೆ': ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
“ರಾಜ್ಯದಲ್ಲಿ ಮೂತ್ರಪಿಂಡ, ಶ್ವಾಸಕೋಶ, ಯಕೃತ್ತು, ಹೃದಯದಂತಹ ಅಂಗಗಳಿಗೆ ಬೇಡಿಕೆ ಹೆಚ್ಚುತ್ತಿದ್ದರೂ ಅದರ ಲಭ್ಯತೆ ಬೇಡಿಕೆಗೆ ತಕ್ಕಂತೆ ಇಲ್ಲ. ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಿಸುವುದು ಅತ್ಯಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದರು.

ಪ್ರತೀಕ್ ಗೌಡ ಹಿಂದೂ ಯುವತಿಯರ ಅಶ್ಲೀಲ ವೀಡಿಯೊ ಬಿಟ್ಟಾಗ ಬಿಜೆಪಿಯವರು ಎಲ್ಲಿದ್ದರು: ದಿನೇಶ್ ಗುಂಡೂರಾವ್
ಉಡುಪಿಯ ಕಾಲೇಜೊಂದರ ವೀಡಿಯೊ ಚಿತ್ರೀಕರಣ ಪ್ರಕರಣವನ್ನು ಬಿಜೆಪಿ ಉದ್ದೇಶ ಪೂರಕವಾಗಿ ರಾಜಕೀಯಗೊಳಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಅಂಗಾಂಗ ದಾನ: ರಾಯಭಾರಿಯಾಗಲು ಅಶ್ವಿನಿ ಪುನೀತ್ ರಾಜಕುಮಾರ್ಗೆ ಆರೋಗ್ಯ ಇಲಾಖೆ ಆಹ್ವಾನ
ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ.

