Dinesh Gundurao

ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ- ದಿನೇಶ್ ಗುಂಡೂರಾವ್
ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು.

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು: ಆರೋಗ್ಯ ಸಚಿವ
ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ 36 ಜನರ ಸಾವಿಗೆ ಕಾರಣವಾದ 2021 ರ ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು.

ಮೋದಿಯವರ ಅಂಧ ಭಕ್ತರೂ 'ಮನ್ ಕಿ ಬಾತ್' ಕೇಳುತ್ತಿಲ್ಲ: ಸಚಿವ ದಿನೇಶ್ ಗುಂಡೂರಾವ್
ಇಂದು ಮೋದಿಯವರ 102ನೇ ಸಂಚಿಕೆಯ ಮನ್ ಕೀ ಬಾತ್. ಇತ್ತೀಚಿನ ವರದಿಗಳ ಪ್ರಕಾರ ಮೋದಿಯವರ ಅಂಧ ಭಕ್ತರೂ ಮನ್ ಕಿ ಬಾತ್ ಕೇಳುತ್ತಿಲ್ಲ. ಆದರೂ ಮೋದಿಯವರು ಛಲ ಬಿಡದ ತ್ರಿವಿಕ್ರಮನಂತೆ ಮನ್ ಕಿ ಬಾತ್ ಮಾಡುತ್ತಲೇ ಇದ್ದಾರೆಂದು ಸಚಿವ ದಿನೇಶ್ ಗುಂಡೂರಾವ್ ಅವರು ವ್ಯಂಗ್ಯವಾಡಿದ್ದಾರೆ.

ಹಾರ, ತುರಾಯಿ ಬದಲು ಪುಸ್ತಕಗಳ ನೀಡಿ: ಸಿಎಂ ಹಾದಿ ಅನುಸರಿಸಿದ ಸಚಿವ ದಿನೇಶ್ ಗುಂಡೂರಾವ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾದರಿಯನ್ನೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ ಅನುಸರಿಸಿದ್ದು, ಇನ್ನು ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ಬದಲು ಪುಸ್ತಕಗಳ ನೀಡಿ ಎಂದು ಮನವಿ ಮಾಡಿದ್ದಾರೆ.

ಕೆಸಿ ಜನರಲ್ ಆಸ್ಪತ್ರೆಯಲ್ಲಿ ಲೋಪದೋಷಗಳು ಪತ್ತೆ: ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ಗುಂಡುರಾವ್ ಸೂಚನೆ
ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಬುಧವಾರ ಕೆಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಹಲವು ಲೋಪದೋಷಗಳ ಪತ್ತೆ ಮಾಡಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ದೀರ್ಘಕಾಲದ ಒಡನಾಟವಿದೆ, ಇಲ್ಲಿನ ಅಭಿವೃದ್ಧಿಗೆ ಬದ್ಧ: ಸಚಿವ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 11 ರ ಭಾನುವಾರದಂದು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ತಮ್ಮ ಭೇಟಿಯ ವೇಳೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಜವಾಬ್ದಾರಿಯನ್ನು ನಿಭಾಯಿಸುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದರು.

ಚಾಮರಾಜನಗರದ ಆಕ್ಸಿಜನ್ ದುರಂತ: ಮರು ತನಿಖೆಗೆ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಆರೋಗ್ಯ ಸಚಿವ ಮನವಿ
2021ರಲ್ಲಿ ಕೋವಿಡ್ ಉಲ್ಬಣಗೊಂಡಿದ್ದ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ 36 ಮಂದಿ ಸಾವಿಗೀಡಾದ ಚಾಮರಾಜನಗರ ಜಿಲ್ಲಾ ಆಸ್ಪತ್ರೆ ದುರಂತ ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ತಿಂಗಳ 10ನೇ ತಾರೀಖಿನೊಳಗೆ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ನೀಡಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರ (ಆಶಾ) ಮಾಸಿಕ ಗೌರವಧನವನ್ನು ತಿಂಗಳ 10 ರೊಳಗೆ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಶುಕ್ರವಾರ ಸೂಚನೆ ನೀಡಿದೆ.

ಬೊಮ್ಮಾಯಿ ಪ್ರಾಜ್ಞರು- ಪ್ರಜ್ಞಾವಂತರೆಂದು ಭಾವಿಸಿದ್ದೆ: ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುಟ್ಟತುದಿಗೆ ಏರಿದ್ದಾರೆ!
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಮುವಾದಿಗಳ ಸಹವಾಸ ಮಾಡಿ ಅವಿವೇಕದ ತುಟ್ಟತುದಿಗೆ ಏರಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ

