dinner meeting

ದೆಹಲಿಯಲ್ಲಿ ಡಿ.ಕೆ ಶಿವಕುಮಾರ್: ಬೆಂಬಲಿಗರೊಂದಿಗೆ ಭೋಜನಕೂಟ; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!
ಇದರ ನಡುವೆ, ಮೂರು ಬಾರಿ ಅಥವಾ ಅದಕ್ಕಿಂತ ಹೆಚ್ಚು ಗೆದ್ದಿರುವ ಸುಮಾರು 40 ಶಾಸಕರು – ಸಿದ್ದರಾಮಯ್ಯ ಬೆಂಬಲಿಗರು – ಏಪ್ರಿಲ್ 12ರಂದು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್‌ನ್ನು ಭೇಟಿ ಮಾಡುವ ಯೋಜನೆ ರೂಪಿಸಿದ್ದಾರೆ.

ಸಿಎಂ-ಡಿಸಿಎಂ ನಂತರ 48 ಕಾಂಗ್ರೆಸ್ ಶಾಸಕರಿಂದ ಡಿನ್ನರ್ ಮೀಟಿಂಗ್: ಸಚಿವ ಸ್ಥಾನಕ್ಕೆ ಬೇಡಿಕೆಯಿಡಲು ಕಾರ್ಯತಂತ್ರ ಚರ್ಚೆ
ಕಾಂಗ್ರೆಸ್ ನಲ್ಲಿ ಮೊದಲು ಮತ್ತು ಎರಡನೇ ಬಾರಿ ಆಯ್ಕೆಯಾದ ಶಾಸಕರಿಂದ ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಔತಣಕೂಟ ಸಭೆ ನಡೆದಿದೆ. 48 ಶಾಸಕರು ಈ ಡಿನ್ನರ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

KPCC ಅಧ್ಯಕ್ಷರಾಗಿ ಆರು ವರ್ಷ: ಡಿ.ಕೆ ಶಿವಕುಮಾರ್ ಔತಣಕೂಟ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ; ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ
ಈ ಮೈಲಿಗಲ್ಲನ್ನು ಆಚರಿಸಲು ನಿನ್ನೆ ಮಂಗಳವಾರ ಡಿ ಕೆ ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾಗವಹಿಸಿದ್ದು, ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷದೊಳಗೆ ಹೊಸ ರಾಜಕೀಯ ಊಹಾಪೋಹಗಳಿಗೆ ಕಾರಣವಾಗಿದೆ.

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ': ಡಿ.ಕೆ ಶಿವಕುಮಾರ್; Video
ಒಬ್ಬ ಸ್ನೇಹಿತನ ಕುಟುಂಬದಲ್ಲಿ ಮದುವೆ ಇದ್ದುದರಿಂದ ನಿನ್ನೆ ದೆಹಲಿಗೆ ಬಂದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ ಎಂದರು.

CM ಆಪ್ತರಿಗೆ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವದ ಸಮಸ್ಯೆ ಇನ್ನೂ ಜೀವಂತ!
ಡಿಸೆಂಬರ್ 27 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಗೆ ಮೊದಲು ಅಥವಾ ನಂತರ ಹೈಕಮಾಂಡ್ ಇಬ್ಬರಿಗೂ ಕರೆ ನೀಡುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್: ಎಲ್ಲರೂ ಸೇರಿರೋದ್ರಲ್ಲಿ ತಪ್ಪೇನಿದೆ; ಡಿ.ಕೆ ಶಿವಕುಮಾರ್
ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ.

ಸಿಎಂ ಕುರ್ಚಿ ಕದನ: ಸತೀಶ್ ಜಾರಕಿಹೊಳಿ ಔತಣಕೂಟದಲ್ಲಿ ಸಿದ್ದರಾಮಯ್ಯ ಭಾಗಿ, ಹೆಚ್ಚಿದ ಕುತೂಹಲ
ಸಿದ್ದರಾಮಯ್ಯ ಅವರಷ್ಟೇ ಅಲ್ಲದೆ, ಸಚಿವರಾದ ಜಿ ಪರಮೇಶ್ವರ್, ಎಚ್‌ಸಿ ಮಹಾದೇವಪ್ಪ, ಜಮೀರ್ ಅಹ್ಮದ್ ಖಾನ್, ಎಂಸಿ ಸುಧಾಕರ್ ಮತ್ತು ಶಾಸಕ ಎಎಸ್ ಪೊನ್ನಣ್ಣ ಹಾಜರಿದ್ದರು ಎಂದು ತಿಳಿದುಬಂದಿದೆ. ಇವರೆಲ್ಲರೂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದಾರೆ.

ಕುರ್ಚಿ ಕದನ: ದಲಿತ CM ಚರ್ಚೆಗೆ ಬಲ ತುಂಬಿದ ಜಾರಕಿಹೊಳಿ ಡಿನ್ನರ್ ಮೀಟಿಂಗ್; ಶಾಸಕರ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಯ್ತು ಔತಣಕೂಟ..!
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷಾತೀತವಾಗಿ ದಲಿತ ಶಾಸಕರು, ಸಚಿವರು ಹಾಗೂ ಉದ್ಯಮಿಗಳ ಸಭೆ ನಡೆಸಿದ್ದು, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತಾ? ಡಿ.ಕೆ ಶಿವಕುಮಾರ್
ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ?

