ರಾಜಕೀಯಅಮಿತ್ ಶಾ, ನಡ್ಡಾ ಜೊತೆಗೆ ಕುಮಾರಸ್ವಾಮಿ ಮಹತ್ವದ ಸಭೆ; ಜೆಡಿಎಸ್- ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.