ರಾಜಕೀಯನಾಯಕರ ನಿದ್ದೆಗೆಡಿಸಿದ ಶಾಸಕರ ಪತ್ರ: ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಏನೇನು ಚರ್ಚೆಯಾಗಲಿದೆ?
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡು ತಿಂಗಳಾಗಿದೆ. ಇದೀಗ ಶಾಸಕರ ಒತ್ತಾಯದ ಮೇರೆಗೆ ಇಂದು ಗುರುವಾರ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ(CLP meeting) ನಡೆಯಲಿದೆ. ವಿಧಾನ ಮಂಡಲ ಮುಂಗಾರು ಅಧಿವೇಶನ ಕೆಲ ದಿನಗಳ ಹಿಂದಷ್ಟೇ ಮುಕ್ತಾಯವಾಗಿದೆ.