ರಾಜ್ಯಕಂದಾಯ ಇಲಾಖೆಯ ತಕರಾರು ಪ್ರಕರಣಗಳ 4 ತಿಂಗಳಲ್ಲಿ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ
ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿಂದ 5 ವರ್ಷಗಳವರೆಗಿನ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿದ್ದು, ಈ ಎಲ್ಲಾ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.