DJ Halli

ಬೆಂಗಳೂರು: ಡಿಜೆ ಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ಕಾಮಕಾಂಡ ಎಳೆ ಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತ ಮಹಿಳೆ!
ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ.

ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿ ಹಿಂಸಾಚಾರ ಪ್ರಕರಣಗಳ ಮರು ಪರಿಶೀಲಿಸಿ ಹಿಂಪಡೆಯಲು ಪರಮೇಶ್ವರ್ ಸೂಚನೆ; ಬಿಜೆಪಿ ಕಿಡಿ
ಪ್ರತಿಭಟನೆ ಮತ್ತು ಗಲಭೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳಡಿ ಬಂಧಿಸಲಾಗಿರುವ ಅಮಾಯಕ ಯುವಕರು ಮತ್ತು ವಿದ್ಯಾರ್ಥಿಗಳ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮನವಿಯನ್ನು ಪರಿಶೀಲಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು ಗಲಭೆ ಪ್ರಕರಣ: ಐಪಿಸಿ, ಯುಎಪಿಎ ಅಡಿಯಲ್ಲಿ ಎನ್ಐಎ ವಿಚಾರಣೆ ನಡೆಸಬಹುದು- ಹೈಕೋರ್ಟ್
ನಗರದ ಡಿಜೆಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣ ಸಂಬಂಧ ಆರೋಪಿಯೊಬ್ಬನ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಹಾಗೂ ಸಾರ್ವಜನಿಕ ಆಸ್ತಿ ತಡೆ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಎನ್ಐಎ ವಿಶೇಷ ಕೋರ್ಟ್ ಕ್ರಮ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಕಿಂಗ್ ಪಿನ್ ಬಂಧನ
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಎನ್ಐಎ ಹಾಗೂ ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ದಂಗೆಯ ಆರೋಪಿಗಳನ್ನು ಕೂಡಲೇ ಬಂಧಿಸಿ: ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ದಂಗೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ತನಿಖಾ ತಂಡಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ಡಿಜೆ ಹಳ್ಳಿ: ಹತ್ಯೆಗಾಗಿ ಕರೆತರಲಾಗಿದ್ದ ಆರು ಜಾನುವಾರುಗಳ ರಕ್ಷಣೆ
ಗೋ ಗ್ಯಾನ್ ಫೌಂಡೇಶನ್‌ನ ಸದಸ್ಯರು ಸ್ಥಳೀಯ ಪೊಲೀಸರ ಸಹಾಯದಿಂದ ಭಾನುವಾರ ಡಿಜೆ ಹಳ್ಳಿಯ ಪ್ರದೇಶದ ನಿವಾಸಿಗಳು ಕರೆತಂದ ಆರು ದನಗಳ ರಕ್ಷಿಸಿದ ನಂತರ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಡಿಜೆ ಹಳ್ಳಿ ಗಲಭೆ: 18 ಆರೋಪಿಗಳಿಗೆ ಎನ್ಐಎ ಕೋರ್ಟ್ ಜಾಮೀನು ನಿರಾಕರಣೆ
ಡಿಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಕೋರ್ಟ್ 18 ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ.

ಡಿಜೆ ಹಳ್ಳಿ ಗಲಭೆ ಪ್ರಕರಣ: ಹಾನಿಗೊಳಗಾಗಿದ್ದ ಮನೆ ನೆಲಸಮಗೊಳಿಸಿ ಮರುನಿರ್ಮಾಣ ಕಾರ್ಯ ಕೈಗೊಂಡ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಭಸ್ಮಗೊಂಡಿದ್ದ ಮನೆಯನ್ನು ನೆಲಸಮಗೊಳಿಸಿರುವ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಮರು ನಿರ್ಮಾಣ ಮಾಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು ಗಲಭೆ ಪ್ರಕರಣ: ಎನ್ಐಎ ತನಿಖೆ ಸಾಧ್ಯತೆ
ಆಗಸ್ಟ್ 11 ರಂದು ನಗರದ ಡಿಜೆ ಹಳ್ಳಿಯಲ್ಲಿ ಸಂಭವಿಸಿದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಅಲ್-ಹಿಂದ್ ಭಯೋತ್ಪಾದನೆ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾದ ಆರೋಪಿ ಸೇರಿ ಇಬ್ಬರನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಶಪಡಿಸಿದ್ದು, ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಭಯೋತ್ಪಾದನಾ ನಿಗ್ರಹ ದಳ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

