ರಾಜ್ಯದೇಶದ್ರೋಹದಂತಹ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನಿನ ಕರುಣೆ ತೋರಲಾಗದು: ಹೈಕೋರ್ಟ್
2020 ರಲ್ಲಿ ನಡೆದ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಯಲ್ಲಿ ಭಾಗಿಯಾಗಿರುವ ಆರೋಪಿ ಇಮ್ರಾನ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್ ಮತ್ತು ಪ್ರದೀಪ್ ಸಿಂಗ್ ಯೆರೂರ್ ಅವರ ವಿಭಾಗೀಯ ಪೀಠವು ಮನವಿಯನ್ನು ಅರ್ಹವಲ್ಲದ ಕಾರಣ ವಜಾಗೊಳಿಸಿದೆ.