DK Shivakumar

ಬೆಂಗಳೂರಿನಲ್ಲಿ ಡಿಕೆಶಿ ರೋಡ್ ಶೋ: ಬೆಂಬಲಿಗರ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲು
ಮಾಜಿ ಸಚಿವ ಡಿ ಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆ ಬಳಿಕ ಬೆಂಗಳೂರಿನಲ್ಲಿ ನಡೆದ ರೋಡ್ ಷೋ ಸಂದರ್ಭದಲ್ಲಿ ಕೋರ್ಟ್ ನಿಯಮ ಮೀರಿ ಸುಮುಟೋ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 15 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನನ್ನ ಪ್ರಾಣ ಹೋಗಲಿ ಆದರೆ ಮೆಡಿಕಲ್ ಕಾಲೇಜು ಬಿಟ್ಟುಕೊಡುವುದಿಲ್ಲ : ಡಿ.ಕೆ. ಶಿವಕುಮಾರ್
ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಹೋರಾಟ ಮಾಡಲು ನಾನು ಸಿದ್ಧನಿದ್ದು,ವಿಧಾನಸೌಧದಲ್ಲಿ ನನ್ನ ಪ್ರಾಣ ಬೇಕಿದ್ದರೆ ಹೋಗಲಿ.ಆದರೆ ಮೆಡಿಕಲ್ ಕಾಲೇಜನ್ನು ಮಾತ್ರ ಬಿಟ್ಟು ಕೊಡುವುದಿಲ್ಲ, ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉದ್ದೇಶಪೂರ್ವಕವಾಗಿ ಜೆಡಿಎಸ್ ಬಾವುಟ ಹಿಡಿದಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ದೆಹಲಿಯಿಂದ ನಗರಕ್ಕೆ ಆಗಮಿಸಿದ ದಿನ ಕನ್ನಡ ಬಾವೂಟ ಸೇರಿದಂತೆ ಹಲವರು ಬಾವುಟಗಳನ್ನ ಕೊಟ್ಟಿದ್ದರು. ಅದನ್ನ ನಾನು ಹಿಡಿದು ಕೊಂಡಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ತಮ್ಮ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟೇ....
ಜೈಲಿನಿಂದ ಬಿಡುಗಡೆಯಾದ ಬಳಿಕ ಡಿ.ಕೆ ಶಿವಕುಮಾರ್ ಅವರಿಗೆ ರಾಜ್ಯದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿತ್ತು. ಈ ಸಂದರ್ಭದಲ್ಲಿ ಅವರು ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಮತ್ತಿತರರು ಅಸಮಾಧಾನ ತೋರ್ಪಡಿಸಿಕೊಂಡಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಫೋನ್ ನೀಡಿದ್ದಕ್ಕೆ ನನಗೆ ಐಟಿ ನೊಟೀಸ್, ಗಿಫ್ಟ್ ತೆಗೆದುಕೊಂಡ ಬಿಜೆಪಿ ಸಂಸದರಿಗೇಕಿಲ್ಲ: ಡಿಕೆಶಿ
ಲೋಕಸಭೆ ಚುನಾವಣೆಯ ನಂತರ ಹೊಸಗಿ ಆಯ್ಕೆಯಾದ ಎಲ್ಲಾ ಸಂಸದರಿಗೆ ನಾನು ಫೋನ್ ಗಿಫ್ಟ್ ನೀಡಿದ್ದಕ್ಕೆ ಆದಾಯ ತೆರಿಗೆ ಇಲಾಖೆ ನೊಟೀಸ್ ಜಾರಿ ಮಾಡಿತ್ತು.

ವಿಡಿಯೋ ತಂದಿಟ್ಟ ಫಜೀತಿ: ಜೆಡಿಎಸ್ ಧ್ವಜ ಹಿಡಿದ ಡಿಕೆಶಿ, ಸಿದ್ದು ಆಪ್ತರ ಸಭೆಯಲ್ಲಿ ಅಸಮಾಧಾನ ಸ್ಪೋಟ!
ದೆಹಲಿಯಿಂದ ನಿನ್ನೆ ನಗರಕ್ಕೆ ಆಗಮಿಸಿದಾಗ ಬೆಂಬಲಿಗರು ನೀಡಿದ ಸ್ವಾಗತದ ವೇಳೆ ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಆಪ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಲ ಬದಲಾಗಿದೆ, ಜಾಮೀನಿನ ಮೇಲೆ ಹೊರಬಂದವರನ್ನ ಸ್ವಾಗತ ಮಾಡೋ ಸಮಾಜವಿದು: ಸಂತೋಷ್ ಹೆಗ್ಡೆ ವಿಷಾದ
ಹಿಂದೆ ಜೈಲಿಗೆ ಹೋಗಿ ಬಂದವರನ್ನು ಜನರು ತಿರಸ್ಕಾರ ಭಾವದಿಂದ ನೋಡುತ್ತಿದ್ದರು. ಆದರೆ ಇದೀಗ ಕಾಲ ಬದಲಾಗಿದೆ. ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾ ದವರಿಗೆ ಸ್ವಾಗತ ಮಾಡುವ ಸಮಾಜದಲ್ಲಿ ನಾವಿದ್ದೇವೆ....

ತಿಹಾರ್ ಜೈಲಿನಿಂದ ಹೊರ ಬಂದಿರುವ ಡಿ.ಕೆ.ಶಿ ಸ್ವಾಗತಿಸಲು ಬೆಂಬಲಿಗರ ಪಡೆ ಸಜ್ಜು
ಅಕ್ರಮ ಹಣಕಾಸು ವಹಿವಾಟು ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸಿ ನ್ಯಾಯಾಲಯದಿಂದ ಜಾಮೀನು ಪಡೆದಿರುವ ಹೊರ ಬಂದಿರುವ ಮಾಜಿ ಸಚಿವ, ಹಿರಿಯ ಶಾಸಕ ಡಿ.ಕೆ. ಶಿವಕಮಾರ್ ಶನಿವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಅವರ ಬೆಂಬಲಿಗರ ಪಡೆ ಸಜ್ಜಾಗಿದೆ.

ನಾನು ತಪ್ಪು ಮಾಡಿಲ್ಲ, ಹೀಗಾಗಿ ಜನ ಬೆಂಬಲ ಸಿಕ್ಕಿದೆ, ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದ: ಡಿ.ಕೆ. ಶಿವಕುಮಾರ್
ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನನಗೆ ಜನರ ಬೆಂಬಲ ಸಿಕ್ಕಿದೆ. ಕಷ್ಟಕಾಲದಲ್ಲಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ನನಗೆ ಕಾನೂನಿನ ಮೇಲೆ ಗೌರವವಿದೆ. ನನ್ನ ಹೋರಾಟ ಮುಂದುವರಿಸುತ್ತೇನೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿದ್ದಾರೆ.

