DK Shivakumar

ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಒಕ್ಕಲಿಗರ ಬೃಹತ್ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

ಡಿಕೆ ಶಿವಕುಮಾರ್ ಪುತ್ರಿಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್!
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿಗೆ ಇಡಿ ನೋಟಿಸ್ ನೀಡಿದೆ.

ಸಂಸದ ಡಿ.ಕೆ.ಸುರೇಶ್ ಗೆ ಸ್ಥೈರ್ಯ ತುಂಬಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ. ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಇಂದು ಬೆಳೆಗ್ಗೆ ಕರೆಸಿಕೊಂಡು ಅವರ ಸಹೋದರ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ, ನೈತಿಕ ಸ್ಥೈರ್ಯ ತುಂಬಿದ್ದಾರೆ.

ಐಟಿ, ಇಡಿ ಕೇಂದ್ರ ಅಧೀನ ಸಂಸ್ಥೆಗಳೆಂಬ ಕನಿಷ್ಠ ಜ್ಞಾನವೂ ಕಟೀಲ್‍ಗೆ ಇಲ್ಲ - ಸಿದ್ದರಾಮಯ್ಯ ವ್ಯಂಗ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಡಿ ಕೆ ಶಿವಕುಮಾರ್ ಜೈಲು ಸೇರಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ, ಜಾರಿ ನಿರ್ದೇಶನಾಲಯ(ಇಡಿ) ಕೇಂದ್ರೀಯ ಸಂಸ್ಥೆಗಳೆಂಬ ಕನಿಷ್ಠ ಜ್ಞಾನವೂ ಕಟೀಲ್‍ಗೆ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಡಿಕೆಶಿ ತಾಯಿ ಕಣ್ಣೀರಿನ ಶಾಪ ಬಿಜೆಪಿಗೆ ತಟ್ಟಲಿದೆ: ಎಚ್ ಡಿ ಕುಮಾರಸ್ವಾಮಿ
ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿ ಮಾಡಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದು, ಅವರ ತಾಯಿಯ ನೋವು ಹಾಗೂ ಕಣ್ಣೀರಿನ ಶಾಪ ಬಿಜೆಪಿಯನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ...

ಜಾರಿ ನಿರ್ದೇಶನಾಲಯ ಜೊತೆ ಡಿ.ಕೆ.ಶಿವಕುಮಾರ್ ರಾಜಿ ಮಾಡಿಕೊಂಡಿಲ್ಲ: ಪ್ರಿಯಾಂಕ್ ಖರ್ಗೆ ಟಾಂಗ್
ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೇಕಾದಂತೆ ಉತ್ತರ ಕೊಡುತ್ತಿಲ್ಲ,ರಾಜೀ ಮಾಡಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಪಕ್ಷದ ಮುಖಂಡ ಡಿ ಕೆ ಶಿವಕುಮಾರ್ ಅವರ ಬಂಧಿಸಲಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಡಿಕೆಶಿ ಬೆಂಬಲಕ್ಕೆ ನಿಂತ ಒಕ್ಕಲಿಗರ ಸಂಘ: ಭಾರೀ ಪ್ರತಿಭಟನೆಗೆ ನಿರ್ಧಾರ!
ಮಾಜಿ ಸಚಿವ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಬಂಧನಕ್ಕೆ ಒಕ್ಕಲಿಗರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಒಕ್ಕಲಿಗರ ಸಂಘ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದೆ.

ದೇಶಕ್ಕಾಗಿ ಹೋರಾಡಿ ಡಿಕೆಶಿ ಜೈಲು ಸೇರಿಲ್ಲ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವ್ಯಂಗ್ಯ
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಕಾನೂನು ಸಂಬಂಧಿಸಿದ ಪ್ರಕ್ರಿಯೆ. ಅದನ್ನು ಮುಂದಿಟ್ಟುಕೊಂಡು ಶಾಂತಿಯುತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಸ್ವಾತಂತ್ರ್ಯವಿದೆ.

ಡಿ ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: 3 ಆರೋಪಿಗಳ ಬಂಧನ 1 ವಾರದ ವರೆಗೆ ಇಲ್ಲ: ಕರ್ನಾಟಕ ಹೈಕೋರ್ಟ್ ಗೆ ಇಡಿ
ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣದ ಇತರ 3 ಆರೋಪಿಗಳನ್ನು ಇನ್ನು 1 ವಾರದ ವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ ಹೈಕೋರ್ಟ್ ಗೆ ಹೇಳಿದೆ.

