DK Shivkumar

ಒಳ ಮೀಸಲಾತಿ ಸಂಕಷ್ಟ: ಸ್ವಪಕ್ಷದಲ್ಲೇ ಭಿನ್ನಾಭಿಪ್ರಾಯ ಸ್ಫೋಟ; ಸಮತೋಲನ ಸಾಧಿಸಲು ಸಿದ್ದು-ಡಿಕೆಶಿ ಕಸರತ್ತು..!
ಮೀಸಲಾತಿ ವಿಚಾರ ಸಂಬಂಧ ಸ್ವಪಕ್ಷದಲ್ಲೇ ಭಿನ್ನಾಭಿಪ್ರಾಯಗಳು ಮೂಡಿವೆ. ಜೊತೆಗೆ ನ್ಯಾಯಾಲಯದಲ್ಲೂ ಪ್ರಕರಣಗಳು ಬಾಕಿಯಿರುವುದರಿಂದ ಸರ್ಕಾರಕ್ಕೆ ನಿರ್ಧಾರ ಕೈಗೊಳ್ಳುವುದು ಸುಲಭವಿಲ್ಲದ ಪರಿಸ್ಥಿತಿ ಉಂಟಾಗಿದೆ.

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕನ್ನಡಿಗನ ಬಾಳಲ್ಲಿ ಹೊಸ ಭರವಸೆ ಮೂಡಿಸಲು ನಮ್ಮ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್
'ಅಭಿವೃದ್ಧಿಯ ಮಂತ್ರ, ಸಮೃದ್ಧಿಯ ಗುರಿ. ಪ್ರತಿಯೊಂದು ವಲಯಕ್ಕೂ ಸಮಾನ ಆದ್ಯತೆ ನೀಡಿ, ಸಮೃದ್ಧ ಕರ್ನಾಟಕದ ನಿರ್ಮಾಣಕ್ಕಾಗಿ 4.48 ಲಕ್ಷ ಕೋಟಿ ರೂ. ಮೊತ್ತದ 2026-2027 ಸಾಲಿನ ಬೃಹತ್ ಬಜೆಟ್ ಮಂಡಿಸಲಾಗಿದೆ.

BJP ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಡಿ.ಕೆ ಶಿವಕುಮಾರ್'ಗೆ ಹೈಕೋರ್ಟ್ ಬಿಗ್ ರಿಲೀಫ್
ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಮುಂದಿನ CM ಡಿ.ಕೆ ಶಿವಕುಮಾರ್: ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆ; ಡಿಕೆಶಿ ಪ್ರತಿಕ್ರಿಯೆ ಏನು..?
ರೈತರ ಮಕ್ಕಳು ಎಂದು ಹೇಳಿಕೊಳ್ಳುವವರು ಅಂತಹ ಯೋಜನೆಯನ್ನೇಕೆ ಮಾಡಲಿಲ್ಲ? ನಮ್ಮದು ನಾಳೆಯ ಸರ್ಕಾರವಲ್ಲ, ಇಂದಿನ ಸರ್ಕಾರ. ಕಾವೇರಿ, ಹೇಮಾವತಿ ಮತ್ತು ಎತ್ತಿನಹೊಳೆಯಿಂದ ನೀರು ಬರುತ್ತಿರುವುದು ಮಾಗಡಿಯ ಜನರ ಅದೃಷ್ಟ.

ಬೇರೆಯವ್ರಿಗೆ ಬಜೆಟ್ ಬೇಕು ನಮಗೆ ಬೇಡ, ನಮ್ಮ ಜಿಲ್ಲೆ ಕೆಲಸ ಬಜೆಟ್ ಮೇಲೆ ನಿಂತಿಲ್ಲ: ಡಿ.ಕೆ ಶಿವಕುಮಾರ್
ಇಡೀ ದೇಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಾತ್ರ ಒಂದು ಶಾಲೆಗೆ 15 ಕೋಟಿ ರೂ. ವೆಚ್ಚದಂತೆ 25 ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಬಜೆಟ್‌ನಲ್ಲಿ ಬರೆಸಿದ್ದೇವಾ?

CM-ಪ್ರಧಾನಿ ಹುದ್ದೆಗೇರಿದವರು ಯಾವ ಸಾಕ್ಷಿಗುಡ್ಡೆಗಳನ್ನು ಬಿಟ್ಟು ಹೋಗಿದ್ದಾರೆ: JDSಗೆ ಡಿಕೆಶಿ ಸವಾಲು
ನಾನು ಇಲ್ಲಿ ನಮ್ಮ ಕೆಲಸವನ್ನು ತೋರಿಸಲು ನಿಂತಿದ್ದೇನೆ ಹೊರತು, ಮುಂದೆ ಇಂತಹ ಕೆಲಸ ಮಾಡುತ್ತೇನೆ ಎಂದು ಹೇಳಲು ನಿಂತಿಲ್ಲ. ಶಾಸಕರಾಗಿ, ಸಂಸದರಾಗಿ ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವರು ಇಲ್ಲಿಗೆ ಬಂದು ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡುತ್ತಾರೆ.

ನಮ್ಮ ಶಾಸಕ ಭರತ್ ರೆಡ್ಡಿ ಸೇರಿ ಹಲವರು ದುಬೈನಲ್ಲಿ ಸಿಲುಕಿದ್ದಾರೆ, ರಕ್ಷಣೆಗೆ ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಆಗ್ರಹ
ಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ನ ಶಾಲೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, 80ಕ್ಕೂ ಹೆಚ್ಚು ಶಾಲಾ ಮಕ್ಕಳು ಮೃತಪಟ್ಟಿದ್ದಾರೆ. ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧ ಸರಿಯಲ್ಲ.

5 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ: ಸತ್ಯ ಒಪ್ಪಿಕೊಂಡ ರಾಜ್ಯ ಸರ್ಕಾರ
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿದೆ. ಆದರೂ, ಜನರ ಹಿತದೃಷ್ಟಿಯಿಂದ ಸರ್ಕಾರ ಯೋಜನೆಯನ್ನು ಮುಂದುವರೆಸಿದೆ.

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಚರ್ಚೆಯ ಹಂತದಲ್ಲಿದೆ; DCM ಡಿ.ಕೆ ಶಿವಕುಮಾರ್
ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ. ಮೊಬೈಲ್‌ಗಳ ದುರುಪಯೋಗ ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ಕುರಿತು ಚರ್ಚೆಗಳು ನಡೆಯುತ್ತಿವೆ.

