DK Shivkumar

ಗುಲ್ಬರ್ಗ ಸೇರಿದಂತೆ ಬಿಜೆಪಿಯ 20 ಸ್ಥಾನಗಳಲ್ಲಿ ಕಾಂಗ್ರೆಸ್ ಈ ಬಾರಿ ಗೆಲ್ಲಲಿದೆ: ಡಿಕೆ.ಶಿವಕುಮಾರ್
ಗುಲ್ಬರ್ಗ ಲೋಕಸಭಾ ಕ್ಷೇತ್ರದಿಂದ ಪ್ರಚಾರ ಆರಂಭಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ಗುಲ್ಬರ್ಗ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಬಿಜೆಪಿಯಿಂದ 20 ಸ್ಥಾನಗಳನ್ನು ಕಾಂಗ್ರೆಸ್ ಕಸಿದುಕೊಳ್ಳಲಿದೆ ಎಂದು ಹೇಳಿದ್ದಾರೆ.

204 ರೂ. ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ: ಬೆಂಗಳೂರಿಗೆ ವರ್ಗಾವಣೆ ಕೋರಿ ಯತ್ನಾಳ್ ಮನವಿ, ಡಿಕೆಶಿಗೆ 'ಹೈ' ನೋಟಿಸ್
ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ತೊಂದರೆ ಕೊಟ್ಟಷ್ಟೂ ರಾಜಕೀಯವಾಗಿ ಗಟ್ಟಿಯಾಗಿ ಬೆಳೆಯುತ್ತೇನೆ: ಡಿಸಿಎಂ ಡಿಕೆ.ಶಿವಕುಮಾರ್
ನನಗೆಷ್ಟು ಕಷ್ಟ ಕೊಡುತ್ತಾರೋ ರಾಜಕೀಯವಾಗಿ ಅಷ್ಟೇ ದೊಡ್ಡ ರೀತಿಯಲ್ಲಿ ಬೆಳೆಯುತ್ತೇನೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಸರ್ಕಾರದಿಂದ ದರ ನಿಗದಿ: ಡಿಸಿಎಂ ಡಿಕೆ. ಶಿವಕುಮಾರ್
ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಸರ್ಕಾರದಿಂದ ದರ ನಿಗದಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು.

ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆತ: ಎಲ್ಲಾ ಅರ್ಜಿಗಳ ಒಟ್ಟಾಗಿ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧಾರ
ಡಿ ಕೆ ಶಿವಕುಮಾರ್ ಅವರ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ತುರ್ತಾಗಿ ನಡೆಸುವಂತೆ ಕೋರಿ ಸಿಬಿಐ ವಕೀಲರು ಹಲವು ಬಾರಿ ಕೋರಿದ ಹೊರತಾಗಿಯೂ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಿತು.

ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: ಗಡುವು ವಿಸ್ತರಿಸಿದ ಸರ್ಕಾರ
ನಗರದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮತ್ತೆ 2 ವಾರಗಳ ಕಾಲ ವಿಸ್ತರಣೆ ಮಾಡಿರುವುದಾಗಿ ರಾಜ್ಯ ಸರ್ಕಾರ ಗುರುವಾರ ಹೇಳಿದೆ.

ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದ ಪ್ರಕರಣ: ಫೆ.29ಕ್ಕೆ ವಿಚಾರಣೆ ಮುಂದೂಡಿಕೆ
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 29ಕ್ಕೆ ಮುಂದೂಡಿದೆ.

ಬೆಂಗಳೂರು: ಮತ್ತೆರಡು ಕಡೆ ಟೆಲಿ ಐಸಿಯು ಕ್ಲಸ್ಟರ್'ಗೆ ಡಿ.ಕೆ.ಶಿವಕುಮಾರ್ ಚಾಲನೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬೆಂಗಳೂರಪ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಟೆಲಿ ಐಸಿಯು ಕ್ಲಸ್ಟರ್ ಅನ್ನು ಶುಕ್ರವಾರ ಉದ್ಘಾಟಿಸಿದರು.

ಬಿಜೆಪಿಗಿಂತ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ: ಸ್ವಪಕ್ಷ ನಾಯಕ ಶಿವರಾಮ್ ಹೇಳಿಕೆಗೆ ಡಿಕೆಶಿ ಸಿಡಿಮಿಡಿ, ಶಿಸ್ತು ಕ್ರಮದ ಎಚ್ಚರಿಕೆ
ಬಿಜೆಪಿಗಿಂತಲೂ ಕಾಂಗ್ರೆಸ್‌ನಲ್ಲೇ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಸ್ವಪಕ್ಷದ ನಾಯಕ ಬಿ.ಶಿವರಾಮ್ ಅವರ ಹೇಳಿಕೆಗೆ ಕೆಂಡಾಮಂಡಲಗೊಂಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

