DK Shivkumar

ಬ್ರ್ಯಾಂಡ್ ಬೆಂಗಳೂರು: ಅಭಿಪ್ರಾಯ, ಸಲಹೆ ನೀಡುವ ಅವಧಿ ಜುಲೈ 15 ರವರೆಗೆ ವಿಸ್ತರಣೆ
ರಾಜ್ಯ ರಾಜಧಾನಿ ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ, ಅನಿಸಿಕೆ, ಸಲಹೆಗಳನ್ನು ನೀಡುವ ಅವಧಿಯನ್ನು ಜೂನ್ 30 ರಿಂದ ಜುಲೈ 15 ರವರೆಗೆ ವಿಸ್ತರಿಸಲಾಗಿದೆ.

ರಾಮನಗರದಲ್ಲಿ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ರಾಮನಗರದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಕೆಂಪೇಗೌಡ ಜಯಂತಿಗೆ ಸರ್ಕಾರ ಭರ್ಜರಿ ಸಿದ್ಧತೆ: ವಾರ್ಡ್‌ಗೆ ಒಬ್ಬರಂತೆ 198 ಮಂದಿ ಪ್ರಶಸ್ತಿಗೆ ಆಯ್ಕೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್. 28 ರಿಂದ ಜುಲೈ 5 ರವರೆಗೆ ಕ್ಷೇತ್ರವಾರು ಕೆಂಪೇಗೌಡ ಜಯಂತಿ ಆಚರಿಸಲು ನಿರ್ಧರಿಸಿದ್ದು, ಈ ಸಂಬಂಧ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದೆ. ಇದರಂತೆ ಗುರುವಾರ ಮಹತ್ವದ ಸಭೆಯೊಂದನ್ನು ನಡೆಸಿದೆ.

ಡಿಕೆಶಿ ಸಿಎಂ ಆಗಲ್ಲವೆಂದು ಡಿ.ಕೆ.ಸುರೇಶ್ಗೆ ಗೊತ್ತಾಗಿದೆ, ಹೀಗಾಗಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ: ಬಿಜೆಪಿ
ಡಿ.ಕೆ.ಶಿವಕುಮಾರ್ ಸಿಎಂ ಆಗಲ್ಲವೆಂದು ಡಿ.ಕೆ.ಸುರೇಶ್ಗೆ ಗೊತ್ತಾಗಿದೆ. ಹೀಗಾಗಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದಾರೆಂದು ಬಿಜೆಪಿ ವ್ಯಂಗ್ಯವಾಡಿದೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದ್ದಕ್ಕೆ ಆಕ್ರೋಶ: ಜೂನ್ 20ರಂದು ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ
'ಅನ್ನಭಾಗ್ಯ' ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ರಾಜಕೀಯ ದೇಷ ಸಾಧಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜೂನ್ 20ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಶುಕ್ರವಾರ ಹೇಳಿದೆ.

ಬಿಜೆಪಿ ಕುರಿತು ಮಾನಹಾನಿ ಜಾಹೀರಾತು ಪ್ರಕರಣ: ರಾಹುಲ್, ಸಿದ್ದು, ಡಿಕೆಶಿಗೆ ಸಮನ್ಸ್ ಜಾರಿ
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ ಶಿವಕುಮಾರ್
ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ನೀರಿನ ದರ ಪರಿಷ್ಕರಣೆ ಕುರಿತು ಶೀಘ್ರದಲ್ಲೇ ನಿರ್ಧಾರ: ಡಿಕೆ ಶಿವಕುಮಾರ್
ಬೆಂಗಳೂರು ನಗರದಲ್ಲಿ ನೀರು ಬಳಕೆ ಶುಲ್ಕ ಏರಿಕೆ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕು: ಡಿಸಿಎಂ ಡಿಕೆ.ಶಿವಕುಮಾರ್
ಮಾಲಿನ್ಯ ನಿಯಂತ್ರಣದ ಕ್ರಮಗಳ ಅನುಷ್ಠಾನ ವಿಳಂಬದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ- ಅರಣ್ಯ ಇಲಾಖೆಗಳು ಕೈಗಾರಿಕೆಗಳನ್ನು ಹೊಣೆಗಾರರನ್ನಾಗಿಸಬೇಕೆಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

