DK Shivkumar

ಶಿವಮೊಗ್ಗ ಪ್ರವಾಸ ರದ್ದುಗೊಳಿಸಿ ನ್ಯಾಯಾಲಯಕ್ಕೆ ತೆರಳಿದ ಡಿಕೆ ಶಿವಕುಮಾರ್
ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿವಮೊಗ್ಗಕ್ಕೆ ಪ್ರಯಾಣ ಮಾಡಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಶಿವಮೊಗ್ಗ ಭೇಟಿಯನ್ನು ಕೊನೆ ಕ್ಷಣದಲ್ಲಿ ರದ್ದುಗೊಳಿಸಿದ ಡಿಕೆಶಿ, ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ತೆರಳಿದ್ದಾರೆ.

ಪ್ರತಿಭಟನೆ ವೇಳೆ ದೆಹಲಿ ಪೊಲೀಸರಿಂದ ಹಲ್ಲೆ: ಇದು ಪ್ರಜಾಪ್ರಭುತ್ವವೇ; ಕಾಂಗ್ರೆಸ್ ನಾಯಕರ ಪ್ರಶ್ನೆ
ರಾಷ್ಟ್ರ ರಾಜಧಾನಿ ದೆಹಲಿಯ ಕಾಂಗ್ರೆಸ್ ಕಚೇರಿಗೆ ತೆರಳುತ್ತಿದ್ದ ವೇಳೆ ಪಕ್ಷದ ನಾಯಕರನ್ನು ಬಂಧಿಸಿರುವ ದೆಹಲಿ ಪೊಲೀಸರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ಚುನಾವಣೆಯಲ್ಲಿ ಅಕ್ರಮ ಸಾಧ್ಯತೆ: ಭದ್ರತೆ ಹೆಚ್ಚಿಸುವಂತೆ ಆಯೋಗಕ್ಕೆ ಕಾಂಗ್ರೆಸ್ ಮನವಿ
ಬೆಳಗಾವಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅಕ್ರಮಗಳು ನಡೆಯುವ ಸಾಧ್ಯತೆಗಳಿದ್ದು, ಭದ್ರತೆ ಹೆಚ್ಚಿಸುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಸೋಮವಾರ ಮನವಿ ಮಾಡಿಕೊಂಡಿದೆ.

ಸ್ಥಳೀಯರ ಆದ್ಯತೆ ಮೇರೆಗೆ ಟಿಕೆಟ್ ನೀಡಲಾಗಿದೆ: ಡಿ.ಕೆ. ಶಿವಕುಮಾರ್
ಸ್ಥಳೀಯರಿಗೆ ಯಾರ ಮೇಲೆ ಒಲವಿರುತ್ತದೆಯೋ ಅಂತವರಿಗೆ ಅವಕಾಶ ಕೊಡಬೇಕು. ಕೆಲವೊಮ್ಮೆ ಈ ಪದ್ಧತಿ ಅನಿವಾರ್ಯವeಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟು ಜಾರಿಗೆ ಆಗ್ರಹ: ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧಾರ
ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ.

ಪ್ರಧಾನಿ ಮೋದಿ ಹೆಬ್ಬೆಟ್ ಗಿರಾಕಿ: ಕಾಂಗ್ರೆಸ್ ಟ್ವೀಟ್'ಗೆ ಡಿಕೆಶಿ ವಿಷಾದ
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಹೆಬ್ಬೆಟ್ ಗಿರಾಕಿ’ ಎಂದು ರಾಜ್ಯ ಕಾಂಗ್ರೆಸ್ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದ್ದು, ಈ ಹೇಳಿಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ನನಗೆ ಗಾಡ್ ಫಾದರ್, ಅವರಿಗೆ ಕೈ ಮುಗಿದು ಕ್ಷಮೆ ಕೋರುತ್ತೇನೆ: ಸಲೀಂ
ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಾರ ಕೈಮುಗಿದು ಕ್ಷಮೆ ಕೋರಿದ್ದಾರೆ.

ಮಂಗಳೂರು: ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್
ನಗರದ ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು.

ಪೆಗಾಸಸ್ ವಿವಾದ: ತನಿಖೆಗೆ ಆಗ್ರಹಿಸಿ ಬೀದಿಗಿಳಿದ ಕಾಂಗ್ರೆಸ್, ರಾಜಭವನ ಮುತ್ತಿಗೆ ಹಾಕಲು ಯತ್ನ, ಹಲವರು ವಶಕ್ಕೆ
ಕೇಂದ್ರ ಸರ್ಕಾರ ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ಅನೇಕ ಗಣ್ಯರ ದೂರವಾಣಿ ಕದ್ದಾಲಿಕೆ ಮಾಡಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದಿಂದ ರಾಜಭವನ ಚಲೋ ನಡೆಸಿ, ಸುಪ್ರೀಂ ಕೋರ್ಟ್'ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

