ರಾಜ್ಯಡಬಲ್ ಎಂಜಿನ್ ಬಿಜೆಪಿ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ಹಾನಿ ಮಾಡುತ್ತಿದೆ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಆರೋಪ
86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಡಬಲ್ ಇಂಜಿನ್ (ರಾಜ್ಯ ಮತ್ತು ಕೇಂದ್ರ) ಬಿಜೆಪಿ ಸರ್ಕಾರಗಳು ಕನ್ನಡ ಭಾಷೆಯ ರಕ್ಷಣೆ ಮತ್ತು ಬೆಳವಣಿಗೆಗೆ ನೀಡಿರುವ ಕೊಡುಗೆಯನ್ನು ಪ್ರಶ್ನಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಹಿಂದಿ ಭಾಷೆ ಹೇರಿಕೆ ಮೇಲೆ ಅವರು ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.