ರಾಜ್ಯ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾವೇರಿಯಲ್ಲಿ ಚಾಲನೆ, ಅಕ್ಷರ ಜಾತ್ರೆ ಆರಂಭ: ಕಲಾ ತಂಡಗಳ ಮೆರುಗು
ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದೆ. ಹಾವೇರಿಯಲ್ಲಿ ಇಂದು ಬೆಳಗ್ಗೆ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು.