Dr. Harsh Vardhan

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣವನ್ನು ಒಪ್ಪಿಕೊಂಡ ಕೇಂದ್ರ ಸರ್ಕಾರ
ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.

ಸಾಲು ಸಾಲು ಹಬ್ಬಗಳು, ಚಳಿಗಾಲದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ: ಡಾ. ಹರ್ಷವರ್ಧನ್ ಎಚ್ಚರಿಕೆ
ದೇಶದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್, ಚಳಿಗಾಲದ ಅವಧಿಯಲ್ಲಿ ಇದು ಇನ್ನೂ ಏರಿಕೆಯಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.

ಕರ್ನಾಟಕದಲ್ಲಿ 8ನೇ ವಿಮ್ಸ್ ಮಾದರಿ ಆಸ್ಪತ್ರೆಗೆ ಶೀಘ್ರ ಮಂಜೂರಾತಿ- ಡಾ. ಹರ್ಷವರ್ಧನ್
ಕೇಂದ್ರದ ಎನ್.ಡಿ.ಎ ಸರ್ಕಾರ ದೇಶದ ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಕರ್ನಾಟಕದಲ್ಲಿ ವಿಮ್ಸ್ ಮಾದರಿಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ವೈದ್ಯರು, ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಗಂಭೀರ ಅಪರಾಧ: ಡಾ. ಹರ್ಷವರ್ಧನ್
ಕೋವಿಡ್ 19 ವಿರುದ್ಧದ ಸಮರದಲ್ಲಿ ಸೇನಾನಿಗಳಾಗಿರುವ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮತ್ತು ದಾಳಿ ನಡೆಸುವುದು ಗಂಭೀರ ಅಪರಾಧವಾಗಿದ್ದು, ಇಂತಹ ಧೋರಣೆಯನ್ನು ಸಹಿಸುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.

