Draupadi Murmu

ರಾಷ್ಟ್ರಪತಿ ಚುನಾವಣೆ: ಮೊದಲ ಸುತ್ತಿನಲ್ಲೇ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮುನ್ನಡೆ
ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಗುರುವಾರ ನವದೆಹಲಿಯಲ್ಲಿ ಆರಂಭವಾಗಿದ್ದು, ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೊದಲ ಸುತ್ತಿನಲ್ಲೇ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ.

ದ್ರೌಪದಿ ಮುರ್ಮುರನ್ನು ಬೆಂಬಲಿಸುವುದು ಎಂದರೆ ಬಿಜೆಪಿ ಬೆಂಬಲಿಸುವುದು ಎಂದಲ್ಲ: ಸಂಜಯ್ ರಾವತ್
ರಾಷ್ಟ್ರಪತಿ ಚುನಾವಣೆಯಲ್ಲಿ ಯಾರನ್ನ ಬೆಂಬಲಿಸಬೇಕೆಂಬ ವಿಚಾರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತನ್ನ ಸಂಸದರ ಬೇಡಿಕೆಗೆ ಮಣಿದಿದೆ. ಜುಲೈ 18ರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಶಿವಸೇನೆ ಬೆಂಬಲಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ
ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ರಾಷ್ಟ್ರಪತಿ ಚುನಾವಣೆ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮು
ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ಹುದ್ದೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.

ಭಾನುವಾರ ಬೆಂಗಳೂರಿಗೆ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ: ಶಾಸಕರು- ಸಂಸದರ ಬೆಂಬಲ ಕೋರಿಕೆ
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ
ರಾಷ್ಟ್ರಪತಿ ಆಯ್ಕೆ ಸಂಬಂಧ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಬಗ್ಗೆ ಟ್ವೀಟ್, ರಾಮ್ ಗೋಪಾಲ್ ವರ್ಮ ವಿರುದ್ಧ ದೂರು, ನಿರ್ದೇಶಕರ ಸ್ಪಷ್ಟನೆಯೇನು?
ಹಲವು ಬಾರಿ ತಮ್ಮ ವಿವಾದಾತ್ಮಕ ಹೇಳಿಕೆಗಳು ಮತ್ತು ಟ್ವೀಟ್ ಗಳಿಂದ ಸುದ್ದಿಯಾಗುತ್ತಾರೆ ಬಹುಭಾಷಾ ನಿರ್ದೇಶಕ ಮತ್ತು ನಿರ್ಮಾಪಕ ರಾಮ್ ಗೋಪಾಲ್ ವರ್ಮ. ಈ ಬಾರಿ ಎನ್ ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಬಗ್ಗೆ ಮಾಡಿದ್ದ ಟ್ವೀಟ್ ವಿವಾದ ಸೃಷ್ಟಿಸಿ ದೂರು ಕೂಡ ದಾಖಲಾಗಿದೆ.

ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ: ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ
ಮುಂದಿನ ತಿಂಗಳು ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದ್ರೌಪದಿ ಮುರ್ಮು ಇಂದು ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

