ರಾಜ್ಯಕೊಳಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಎಲ್ಲರಿಗೂ ಕೋವಿಡ್ ಕೇರ್ನಲ್ಲೇ ಚಿಕಿತ್ಸೆ: ಡಾ. ಅಶ್ವತ್ಥ ನಾರಾಯಣ
ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ.