Drinking Water Crisis

ಏಪ್ರಿಲ್ ವೇಳೆಗೆ 411 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ...!
ಈಗಾಗಲೇ 20 ಗ್ರಾಮಗಳಲ್ಲಿ ಅಂತರ್ಜಲ ಬತ್ತಿ ಹೋಗಿದೆ.

ದೆಹಲಿಯ ಜಲ ಬಿಕ್ಕಟ್ಟು: ಹೆಚ್ಚು ನೀರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಚಿವೆ ಅತಿಶಿ
ಕಳೆದ ಎರಡು ವಾರಗಳಿಂದ ಹರಿಯಾಣ 613 MGD ಯ ಬದಲಾಗಿ ದೆಹಲಿಗೆ ದಿನಕ್ಕೆ 100 ಮಿಲಿಯನ್ ಗ್ಯಾಲನ್ ಕಡಿಮೆ ನೀರನ್ನು ಬಿಡುಗಡೆ ಮಾಡುತ್ತಿದೆ ಎಂದು ಸಚಿವೆ ಹೇಳಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ; ಸಿಎಂ ಅಧ್ಯಕ್ಷತೆಯಲ್ಲಿ ನಾಳೆ ಸಭೆ, ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ ಕಿಡಿ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದು, ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ. ಸಂಬಂಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ.

ಅಂತರ್ಜಲ ಕುಸಿತದಿಂದ ರೈತರು ಕಂಗಾಲು; ಲಕ್ಷಗಟ್ಟಲೆ ಖರ್ಚು ಮಾಡಿ ಕೊರೆದರೂ ಬೋರ್‌ವೆಲ್‌ಗಳಿಂದ ಬಾರದ ನೀರು
ಕಾವೇರಿ ನದಿ ಉಗಮ ಸ್ಥಾನವಾದ ಕೊಡಗಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಅಂತರ್ಜಲವೂ ಕುಸಿದಿದೆ. ಇದರಿಂದಾಗಿ ರೈತರು ಹೆಚ್ಚುವರಿ ನಷ್ಟವನ್ನು ಎದುರಿಸುತ್ತಿದ್ದು, ಬೋರ್‌ವೆಲ್‌ಗಳಿಗೆ ಲಕ್ಷಗಟ್ಟಲೆ ಖರ್ಚು ಮಾಡಿದರೂ ನೀರು ಸಿಗುತ್ತಿಲ್ಲ.

ಬೇಸಿಗೆ ವೇಳೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವ ಎಂಬಿ ಪಾಟೀಲ್ ಸೂಚನೆ
ಬೇಸಿಗೆ ಆರಂಭದಲ್ಲೇ ವಿಜಯಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ನಗರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸೂಕ್ತ ಯೋಜನೆ ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯಕ್ಕೆ ಕರ್ನಾಟಕದಲ್ಲಿ ನೀರಿನ ಬಿಕ್ಕಟ್ಟು ದೂರ; ಹಲವು ಅಣೆಕಟ್ಟುಗಳಲ್ಲಿ ಸಮಾಧಾನಕರ ಹರಿವು!
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾನ್ಸೂನ್ ಕಳಪೆಯಾಗಿದ್ದರೂ, ಕಳೆದ ಕೆಲವು ತಿಂಗಳುಗಳಿಂದ ವಿವಿಧ ಅಣೆಕಟ್ಟುಗಳು ಮತ್ತು ನದಿಗಳ ಒಳಹರಿವು ಮತ್ತು ಹೊರಹರಿವಿನ ಪರಿಣಾಮಕಾರಿ ನಿರ್ವಹಣೆಯು ಸಂಭವನೀಯ ಕುಡಿಯುವ ನೀರಿನ ಬಿಕ್ಕಟ್ಟನ್ನು ತಡೆಗಟ್ಟಿದೆ.

ಮಳೆ ಕೊರತೆ: ಫೆಬ್ರವರಿ ಅಂತ್ಯದ ವೇಳೆಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಸಾಧ್ಯತೆ!
ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಮುಂಬರುವ ಬೇಸಿಗೆ ವೇಳೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದರೆ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗುತ್ತದೆ: ಸಿಎನ್‌ಎನ್‌ಎಲ್ ಎಚ್ಚರಿಕೆ
ಸಿಡಬ್ಲ್ಯುಎಂಎ ಮತ್ತು ಸಿಡಬ್ಲ್ಯುಆರ್‌ಸಿ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ತಮಿಳುನಾಡಿಗೆ ಮತ್ತಷ್ಟು ನೀರು ಬಿಡುಗಡೆ ಮಾಡಿದ್ದೇ ಆದರೆ, ರಾಜ್ಯದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಲಿದೆ ಎಂದು ಕಾವೇರಿ ನೀರಾವರಿ ನಿಗಮ ಲಿಮಿಟೆಡ್ (ಸಿಎನ್‌ಎನ್‌ಎಲ್) ಎಚ್ಚರಿಕೆ ನೀಡಿದೆ.

ರಣಚಂಡಿ ಮಳೆಗೆ ದೆಹಲಿ ತತ್ತರ: ಮೂರು ನೀರು ಸಂಸ್ಕರಣಾ ಘಟಕ ಬಂದ್, ಕುಡಿಯುವ ನೀರಿಗೆ ತಾತ್ವಾರ!
ರಣಚಂಡಿ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳದಿಂದಾಗಿ ಮೂರು ನೀರು ಸಂಸ್ಕರಣಾ ಘಟಕಗಳನ್ನು ಬಂದ್ ಮಾಡಿದ ನಂತರ ಸರ್ಕಾರ ಶೇ. 25 ರಷ್ಟು ನೀರಿನ ಪೂರೈಕೆಯನ್ನು ಕಡಿತಗೊಳಿಸಲು ನಿರ್ಧರಿಸಿದ್ದು, ಕುಡಿಯುವ ನೀರಿನ ಕೊರತೆ ಎದುರಾಗಿದೆ.

