drinking water

ಕುಡಿಯುವ ನೀರು -ಜಾನುವಾರುಗಳ ಮೇವಿನ ಕೊರತೆಯಾಗದಂತೆ ಕ್ರಮ: ಕೃಷ್ಣ ಬೈರೇಗೌಡ
ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಪರಿಸ್ಥಿತಿ ನಿಭಾಯಿಸಲು ಮತ್ತು ಜಾನುವಾರುಗಳಿಗೆ ಮೇವು ಅಭಾವ ತಪ್ಪಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬೆಂಗಳೂರಿನ ಅಗತ್ಯತೆಗಳ ಪೂರೈಸಲು ಶರಾವತಿ ನದಿ ನೀರು ತಿರುಗಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಕೆಜೆ ಜಾರ್ಜ್
ಬೆಂಗಳೂರಿನ ಅಗತ್ಯತೆಗಳ ಪೂರೈಸಲು ಶರಾವತಿ ನದಿ ನೀರು ತಿರುಗಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶನಿವಾರ ಹೇಳಿದರು.

ಡೋಂಟ್ ವರಿ: ಬೆಂಗಳೂರು ನಿವಾಸಿಗಳಿಗೆ ಈ ಬಾರಿ ಬೇಸಿಗೆಯಲ್ಲಿ ಕಾಡುವುದಿಲ್ಲ ಕುಡಿಯುವ ನೀರಿನ ಸಮಸ್ಯೆ!
ಬೇಸಿಗೆ ಸಮೀಪಿಸುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ ಎಂಬ ಆತಂಕ ಬೆಂಗಳೂರು ನಗರವಾಸಿಗಳಿಗೆ ಎದುರಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಗಳು ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬಿಕ್ಕಟ್ಟನ್ನು ಅಚ್ಚುಕಟ್ಟಾಗಿ ಎದುರಿಸುವ ವಿಶ್ವಾಸದಲ್ಲಿದ್ದಾರೆ.

ಕೋಲಾರ ಜಿಲ್ಲೆಯ ಮೂರು ತಾಲ್ಲೂಕುಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯರಗೋಳ್ ಡ್ಯಾಂ ಲೋಕಾರ್ಪಣೆ!
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಅಣೆಕಟ್ಟನ್ನು ಸಿಎಂ ಸಿದ್ದರಾಮಯ್ಯ ಇಂದು ಶನಿವಾರ ಲೋಕಾರ್ಪಣೆಗೊಳಿಸಿದರು.

ರಾಜಧಾನಿಗೆ ಕುಡಿಯಲು 6 ಟಿಎಂಸಿ ಹೆಚ್ಚುವರಿ ಕಾವೇರಿ ನೀರು ಮೀಸಲು: ಬಳಕೆ ಕುರಿತು ಬಿಡಬ್ಲ್ಯೂಎಸ್‌ಎಸ್‌ಬಿ ಯೋಜನೆ
ಬೆಂಗಳೂರಿಗೆ ಕುಡಿಯುವ ಉದ್ದೇಶಕ್ಕೆ ಹೆಚ್ಚುವರಿಯಾಗಿ ಆರು ಟಿಎಂಸಿ ಅಡಿ ಕಾವೇರಿ ನೀರನ್ನು ರಾಜ್ಯ ಸರ್ಕಾರ ಹಂಚಿಕೆ ಮಾಡಿದ್ದು, ಹೆಚ್ಚುವರಿ ನೀರನ್ನು ಬಳಕೆ ಮಾಡುವ ಕುರಿತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಯೋಜನೆ ರೂಪಿಸುತ್ತಿದೆ.

ಪ್ರಗತಿ ಯೋಜನೆಗಳು ಕುಂಠಿತ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ ಪ್ರಿಯಾಂಕ್ ಖರ್ಗೆ
ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಯೋಜನೆಗಳು ಕುಂಟುತ್ತಾ ಸಾಗಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶುಕ್ರವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!
68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನ ವಿವಿಧೆಡೆ ನಾಳೆ 'ಕಾವೇರಿ ನೀರು' ಪೂರೈಕೆಯಲ್ಲಿ ವ್ಯತ್ಯಯ
ತಾತಗುಣಿ 220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್ ಮತ್ತು ಕರೆಂಟ್ ಟ್ರಾನ್ಸ್ ಫಾರ್ಮರ್ ಗಳನ್ನು ಸ್ಥಾಪನೆ ಮತ್ತು ಅವುಗಳ ಪರಿಶೀಲನೆ ಹಾಗೂ ಕಾರ್ಯಗತಗೊಳಿಸುವ ಕೆಲಸ ನಿಗದಿ ಹಿನ್ನೆಲೆ ನಗರದಲ್ಲಿ ಶನಿವಾರ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯಗಳು ಕಂಡು ಬರಲಿದೆ ಎಂದು ಬಿಡಬ್ಲ್ಯುಎಸ್‌ಎಸ್‌ಬಿ ಹೇಳಿದೆ.

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವುದರಿಂದ ಬೆಂಗಳೂರಿನ ಮೇಲೆ ಪರಿಣಾಮವಿಲ್ಲ- ಬಿಡಬ್ಲ್ಯೂಎಸ್ಎಸ್'ಬಿ
ಈ ಬಾರಿ ಮಳೆ ಕೊರತೆಯಿಂದಾಗಿ ಈಗಾಗಲೇ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತಗೊಂಡಿದ್ದು, ಈ ನಡುವಲ್ಲೇ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುತ್ತಿರುವುದು ನಗರ ವಾಸಿಗಳಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

