ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.