ರಾಜ್ಯಬರ ಘೋಷಣೆ ವಿಳಂಬಕ್ಕೆ ಕೇಂದ್ರದ ಮಾರ್ಗಸೂಚಿಯೇ ಸಮಸ್ಯೆ: ಸಿಎಂ ಸಿದ್ದರಾಮಯ್ಯ
ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ -2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.