Dr.Sudhakar

ಕೇಂದ್ರ ಸರ್ಕಾರ ಟ್ರಂಪ್‌ನ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಚಿವ ಡಾ. ಎಂ.ಸಿ ಸುಧಾಕರ್
ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಕೊಂಡಿದೆ.

"ನಮ್ಮ ಕ್ಲಿನಿಕ್" ಲೋಗೊ ಡಿಸೈನ್ ಮಾಡಿ, ಪ್ರಶಸ್ತಿ ಗೆಲ್ಲಿ
ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ.

108 ಆಂಬುಲೆನ್ಸ್ ಸೇವೆ ಸ್ಥಗಿತ: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆ- ಕಾಂಗ್ರೆಸ್ ಟೀಕೆ
ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು 40% ಸರ್ಕಾರದ ಅಯೋಗ್ಯತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಬ್ರೇಕ್: ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನ ನೈಟ್ ಕರ್ಫ್ಯೂ; ಸುಧಾಕರ್
ಓಮೈಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳ ವರೆಗೆ ನೈಟ್ ಕರ್ಫ್ಯೂ ಹೇರಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಏಳು ಹೊಸ ಓಮಿಕ್ರಾನ್ ಪ್ರಕರಣ ದೃಢ: ಒಟ್ಟಾರೇ 38ಕ್ಕೆ ಏರಿಕೆ
ರಾಜ್ಯದಲ್ಲಿ ಏಳು ಹೊಸ ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಈ ಪೈಕಿ ಒಬ್ಬರಿಗೆ ಪ್ರಯಾಣದ ಇತಿಹಾಸವಿಲ್ಲ, ಆದರೆ, ದೆಹಲಿಗೆ ಪ್ರಯಾಣಿಸಿದ್ದ ಇಬ್ಬರು ಹಾಗೂ ನಾಲ್ವರು ವಿದೇಶಿ ಪ್ರಯಾಣಿಕರಲ್ಲಿ ಓಮಿಕ್ರಾನ್ ದೃಢಪಟ್ಟಿದೆ.

ಮಕ್ಕಳಿಗೆ ಲಸಿಕೆ: ಪ್ರಧಾನಿಯ ಸಮಯೋಚಿತ ನಿರ್ಧಾರ, ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ-ಡಾ. ಸುಧಾಕರ್
ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸಾಧನೆಯ ಲಸಿಕಾ ಗುರಿ ತಲುಪಿದ ಕರ್ನಾಟಕ; ಪಡೆದವರಲ್ಲಿ ಮಹಿಳೆಯರೇ ಹೆಚ್ಚು: ಸಚಿವ ಡಾ. ಸುಧಾಕರ್
ಕರ್ನಾಟಕ ರಾಜ್ಯದಲ್ಲಿ ನಿಗದಿತ ಕೋವಿಡ್ ಲಸಿಕಾ ಗುರಿ ತಲುಪಲಾಗಿದ್ದು, ಪುರುಷರಿಗಿಂತ ಹೆಚ್ಚಿನ ಮಹಿಳೆಯರೇ ಕೋವಿಡ್ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಕೇರಳದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

