ರಾಜ್ಯರಾಜ್ಯದ ಕ್ರೈಂ ಇತಿಹಾಸದಲ್ಲೇ ಇದೇ ಮೊದಲು: ಡ್ರಗ್ಸ್ ಫ್ಯಾಕ್ಟರಿ ಮೇಲೆ ಸಿಸಿಬಿ ದಾಳಿ, 2 ಕೋಟಿ ರೂ. ಗೂ ಅಧಿಕ ಮೌಲ್ಯದ ಮಾದಕವಸ್ತು ವಶಕ್ಕೆ
ಕರ್ನಾಟಕ ರಾಜ್ಯದ ಕ್ರೈಂ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೆಂಗಳೂರು ಅಪರಾಧ ವಿಭಾಗದ, ಆ್ಯಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳ ತಂಡ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ.