ದೇಶಕ್ರೂಸ್ ಡ್ರಗ್ ಕೇಸು: ಮುಂಬೈ ಹೈಕೋರ್ಟ್ ನಲ್ಲಿ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಅ.26ಕ್ಕೆ
ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಅಕ್ಟೋಬರ್ 26ರಂದು ನಡೆಸಲಿದೆ. ಮುಂಬೈ ಕಡಲಿನಲ್ಲಿ ಕ್ರೂಸ್ ಶಿಪ್ ನಲ್ಲಿ ರೇವ್ ಪಾರ್ಟಿ ವೇಳೆ ಡ್ರಗ್ಸ್ ಸಿಕ್ಕಿದ ಆರೋಪದ ಮೇಲೆ ಆರ್ಯನ್ ಖಾನ್ ಹಾಗೂ ಇತರರನ್ನು ಕಳೆದ ಅಕ್ಟೋಬರ್ 2ರಂದು ರಾತ್ರಿ ಬಂಧಿಸಲಾಗಿತ್ತು.