ರಾಜ್ಯಟಿಡಿಆರ್ ಪ್ರಮಾಣ ಪತ್ರ ನೀಡದೆ ಈಸ್ಟ್ ಇಂಡಿಯಾ ಕಂಪನಿ ಮನಸ್ಥಿತಿ ಪ್ರದರ್ಶನ; ಬಿಡಿಎಗೆ ಹೈಕೋರ್ಟ್ ತರಾಟೆ
ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು(ಟಿಡಿಆರ್) ಸರ್ಟಿಫಿಕೇಟ್ ನೀಡದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕ್ರಮವನ್ನು ಈಚೆಗೆ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ಇದು ಪ್ರಾಧಿಕಾರವು ಇನ್ನೂ ಈಸ್ಟ್ ಇಂಡಿಯಾ ಕಂಪೆನಿಯ ಮನಸ್ಥಿತಿ ಹೊಂದಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಛೀಮಾರಿ ಹಾಕಿತು.