Eastern Ladakh

ಪೂರ್ವ ಲಡಾಖ್ ನಲ್ಲಿ ಸುಮಾರು ಎರಡು ಡಜನ್ ಚೀನಾ ಯುದ್ಧ ವಿಮಾನಗಳ ಹಾರಾಟ!
ಸುಮಾರು ಒಂದು ವರ್ಷದಿಂದಲೂ ಭಾರತ ಹಾಗೂ ಚೀನಾ ಮಿಲಿಟರಿ ವಿವಾದವೇರ್ಪಟ್ಟಿರುವಂತೆಯೇ ಇದೀಗ, ಚೀನಾದ ವಾಯುಪಡೆ ಇತ್ತೀಚಿಗೆ ಪೂರ್ವ ಲಡಾಖ್ ನಲ್ಲಿ ದೊಡ್ಡ ವೈಮಾನಿಕ ಪ್ರದರ್ಶನ ನಡೆಸಿವೆ. ಇದನ್ನು ಭಾರತೀಯ ಸೇನೆ ಹತ್ತಿರದಿಂದ ವೀಕ್ಷಿಸಿದೆ.

ಪೂರ್ವ ಲಡಾಕ್ ಗಡಿಭಾಗದ ಸಂಘರ್ಷ ವಿಚಾರದಲ್ಲಿ ಭಾರತ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಚೀನಾ ಗಡಿಭಾಗ ಪೂರ್ವ ಲಡಾಕ್ ನಲ್ಲಿ ಭಾರತ ಮತ್ತು ಚೀನಾ ದೇಶಗಳ ಸೇನಾಪಡೆ ನಿಯೋಜನೆಗೊಂಡು ಏಳು ತಿಂಗಳಿಗೂ ಅಧಿಕ ಸಮಯ ಕಳೆದಿದೆ. ಇದುವರೆಗೆ ಯಾವುದೇ ಪರಿಹಾರ ಸಿಕ್ಕಿದಂತೆ ಕಾಣುತ್ತಿಲ್ಲ.

ಪೂರ್ವ ಲಡಾಕ್‌ನ ಪಾಂಗೊಂಗ್ ಸರೋವರದ ಬಳಿ ಮಾರ್ಕೋಸ್ ನಿಯೋಜನೆ: ಚೀನಾಗೆ ನಡುಕ!
ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಪೂರ್ವ ಲಡಾಕ್‌ನ ಪಂಗೊಂಗ್ ಸರೋವರ ಪ್ರದೇಶದಲ್ಲಿ ಭಾರತೀಯ ನೌಕಾಪಡೆಯ ಮೆರೈನ್ ಕಮಾಂಡೋಗಳನ್ನು(ಮಾರ್ಕೋಸ್) ಕೇಂದ್ರ ಸರ್ಕಾರ ನಿಯೋಜಿಸಿದೆ.

ಚೀನಾ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ: ರಕ್ಷಣಾ ಪಡೆ ಮುಖ್ಯಸ್ಥ ಜ. ಬಿಪಿನ್ ರಾವತ್
ಗಡಿ ವಾಸ್ತವ ರೇಖೆ(ಎಲ್ಎಸಿ)ರ ಪೂರ್ವ ಲಡಾಕ್ ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಎಂದು ಭಾರತೀಯ ರಕ್ಷಣಾ ಪಡೆ ಮುಖ್ಯಸ್ಥ ಜ.ಬಿಪಿನ್ ರಾವತ್ ಹೇಳಿದ್ದಾರೆ.

ಪೂರ್ವ ಲಡಾಖ್ ಮೇಲೆ ಭಾರತದ ಬಿಗಿ ಹಿಡಿತ; ರಕ್ತವನ್ನೇ ಹೆಪ್ಪುಗಟ್ಟಿಸುವ ಚಳಿಯಲ್ಲೂ ರೊಟೇಷನ್ ಪದ್ಧತಿಯಲ್ಲಿ ಸೈನಿಕರ ಪಹರೆ
ಪೂರ್ವ ಲಡಾಖ್‌ನಲ್ಲಿ ಮುಂಚೂಣಿಯಲ್ಲಿರುವ ಭಾರತೀಯ ಸೇನಾ ಸೈನಿಕರು ಕಾರ್ಯಾಚರಣೆಯ ನಿಯೋಜನೆಯನ್ನು ಅತ್ಯುತ್ತಮವಾಗಿಸಲು ರಕ್ತವನ್ನೇ ಹೆಪ್ಪುಗಟ್ಟಿಸುವ ಚಳಿಯಲ್ಲೂ ರೊಟೇಷನ್ ಪದ್ಧತಿಯಲ್ಲಿ ಗಡಿ ಕಾಯುತ್ತಿದ್ದಾರೆ.

ಭಾರತ ಯಾವತ್ತಿಗೂ ನೆರೆ ದೇಶಗಳೊಂದಿಗೆ ಉತ್ತಮ ಬಾಂಧವ್ಯವನ್ನು ಬಯಸುತ್ತದೆ: ರಾಜನಾಥ್ ಸಿಂಗ್
ಭಾರತ ಯಾವತ್ತಿಗೂ ತನ್ನ ನೆರೆಯ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತದೆ, ಆದರೆ ಕಾಲ ಕಾಲಕ್ಕೆ ತನ್ನ ದೇಶದ ಸಾರ್ವಭೌಮತ್ಯ ಮತ್ತು ಪ್ರಾಂತೀಯ ಐಕ್ಯತೆಯನ್ನು ಕಾಪಾಡಲು ಸರ್ವಶ್ರೇಷ್ಟ ತ್ಯಾಗಗಳನ್ನು ಸೇನೆಯ ಯೋಧರು ಮಾಡುವ ಪರಿಸ್ಥಿತಿ ಬರುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪೂರ್ವ ಲಡಾಕ್ ಸ್ಥಿತಿ ಅಹಿತಕರ; ಅಲ್ಲಿ ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ: ವಾಯುಪಡೆ ಮುಖ್ಯಸ್ಥ ಬದೌರಿಯಾ
ಪೂರ್ವ ಲಡಾಕ್ ನಲ್ಲಿ ಸದ್ಯ ಅತ್ಯಂತ ಕಠಿಣ,ಅಹಿತಕರ ವಾತಾವರಣವಿದ್ದು, ಗಡಿ ವಾಸ್ತವ ರೇಖೆ(ಎಲ್ ಎಸಿ) ಬಳಿ ಯುದ್ಧವಿಲ್ಲ ಹಾಗೆಂದು ಶಾಂತಿಯೂ ಇಲ್ಲ ಎಂಬ ಪರಿಸ್ಥಿತಿಯಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಬದೌರಿಯಾ ತಿಳಿಸಿದ್ದಾರೆ.

ಪೂರ್ವ ಲಡಾಖ್ ನಲ್ಲಿ ಚಳಿಗಾಲದಲ್ಲೂ ಪೂರ್ಣ ಪ್ರಮಾಣದ ಯುದ್ಧಕ್ಕೆ ಭಾರತೀಯ ಸೇನೆ ಸರ್ವ ಸನ್ನದ್ಧ!
ಪೂರ್ವ ಲಡಾಖ್ ನಲ್ಲಿ ಚೀನಾ ಯುದ್ಧದ ಅನಿವಾರ್ಯತೆ ಸೃಷ್ಟಿಸಿದರೆ ಸೇನೆ ಸಮರಕ್ಕೂ ಸರ್ವ ಸನ್ನದ್ಧ ಸ್ಥಿತಿಯಲ್ಲಿದ್ದೂ ಚಳಿಗಾಲದಲ್ಲೂ ಸಮರ್ಥವಾಗಿ ಶತ್ರು ಸೇನೆಯನ್ನು ಎದುರಿಸಲಿದೆ ಎಂದು ಭಾರತೀಯ ಸೇನೆ ಘೋಷಿಸಿದೆ.

'ಈಶಾನ್ಯ ಲಡಾಖ್ ನ ಘರ್ಷಣಾ ಪ್ರದೇಶಗಳಲ್ಲಿನ ಪರಿಸ್ಥಿತಿ ಬದಲಾಗಿಲ್ಲ'
ದೀರ್ಘಾವಧಿಯಿಂದ ಈಶಾನ್ಯ ಲಡಾಖ್ ನಲ್ಲಿ ಉಂಟಾಗಿರುವ ಗಡಿ ಘರ್ಷಣೆ ಬಗೆಹರಿಸಿಕೊಳ್ಳುವುದಕ್ಕೆ ಭಾರತ ಚೀನಾ ವಿದೇಶಾಂಗ ಸಚಿವರು ಸಭೆ ನಡೆಸಿ 5 ಅಂಶಗಳ ಯೋಜನೆಯನ್ನು ಒಪ್ಪಿಕೊಂಡಿದ್ದರು. ಇದಾಗಿ ನಾಲ್ಕು ದಿನಗಳು ಕಳೆದರೂ ಸಹ ಈಶಾನ್ಯ ಲಡಾಖ್ ನ ಘರ್ಷಣೆಯ ಪ್ರದೇಶಗಳಲ್ಲಿ ಕಿಂಚಿತ್ತೂ ಬದಲಾವಣೆಯಾಗಿಲ್ಲ.

