ECI

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿಯ ದಿಲೀಪ್ ಘೋಷ್, ಕಾಂಗ್ರೆಸ್‌ನ ಸುಪ್ರಿಯಾಗೆ ಇಸಿ ಎಚ್ಚರಿಕೆ
ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸೋಮವಾರ ಸೆನ್ಷರಿಂಗ್ ಆದೇಶ ಹೊರಡಿಸಿದೆ.

ಇವಿಎಂಗಳ ಕಾರ್ಯನಿರ್ವಹಣೆಯಲ್ಲಿ ಲೋಪ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಇವಿಎಂ (ವಿದ್ಯುನ್ಮಾನ ಮತ ಯಂತ್ರ)ಗಳ ಕಾರ್ಯನಿರ್ವಹಣೆಯಲ್ಲಿನ ಅವ್ಯವಹಾರಗಳ ಆರೋಪದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ.

ವಾಟ್ಸಾಪ್ ನಲ್ಲಿ ಲೋಕಸಭಾ ಚುನಾವಣೆ ವೇಳಾಪಟ್ಟಿಯ ನಕಲಿ ಸಂದೇಶ: ಚುನಾವಣಾ ಆಯೋಗ ಹೇಳಿದ್ದು ಹೀಗೆ...
ಮುಂಬರುವ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್ ನಲ್ಲಿ ನಕಲಿ ಸಂದೇಶ ಹರಿದಾಡುತ್ತಿದೆ.

ತೆಲಂಗಾಣ ಪತ್ರಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಖಾತರಿ ಯೋಜನೆಗಳ ಜಾಹೀರಾತು: ನಡೆ ಸಮರ್ಥಿಸಿಕೊಂಡ ಸಿಎಂ, ಡಿಸಿಎಂ
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರತೀಯ ಚುನಾವಣಾ ಆಯೋಗ (ECI) ನೋಟಿಸ್ ನೀಡಿದ ನಂತರವೂ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ತನ್ನ ಖಾತರಿ ಯೋಜನೆಗಳ ಜಾಹೀರಾತು ನೀಡಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಇಬ್ಬರು ಜಿಲ್ಲಾಧಿಕಾರಿ, ಮೂವರು ಎಸ್‌ಪಿಗಳನ್ನು ತಕ್ಷಣವೇ ವರ್ಗಾವಣೆ ಮಾಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಚುನಾವಣಾ ಆಯೋಗ
ಇಬ್ಬರು ಜಿಲ್ಲಾಧಿಕಾರಿಗಳು ಮತ್ತು ಮೂವರು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಎಂಟು ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡುವಂತೆ ಭಾರತ ಚುನಾವಣಾ ಆಯೋಗವು (ಇಸಿಐ) ಛತ್ತೀಸ್‌ಗಢ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಅವರಿಗೆ ಯಾವುದೇ ಚುನಾವಣಾ ಸಂಬಂಧಿತ ಜವಾಬ್ದಾರಿಯನ್ನು ನೀಡಬಾರದು ಎಂದು ಸೂಚನೆ ನೀಡಿದೆ.

ರಾಜಸ್ಥಾನ ವಿಧಾನಸಭೆ ಚುನಾವಣೆ: ದಿನಾಂಕ ಬದಲಾವಣೆ, ನವೆಂಬರ್ 25ಕ್ಕೆ ಮತದಾನ!
ಭಾರತೀಯ ಚುನಾವಣಾ ಆಯೋಗ ರಾಜಸ್ಥಾನ ವಿಧಾನಸಭಾ ಚುನಾವಣೆಯ ದಿನಾಂಕವನ್ನು ನವೆಂಬರ್ 23 ರಿಂದ ನವೆಂಬರ್ 25 ಕ್ಕೆ ಬುಧವಾರ ಬದಲಾಯಿಸಿದೆ.

ಚುನಾವಣಾ ಆಯೋಗದ ಮುಂದೆ ಹಾಜರಾಗುತ್ತೇನೆ; ಎನ್‌ಸಿಪಿ ಸಂಸ್ಥಾಪಕರು ಯಾರೆಂಬುದು ಎಲ್ಲರಿಗೂ ತಿಳಿದಿದೆ: ಶರದ್ ಪವಾರ್
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ವಿಭಜನೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ತನ್ನ ನಿಲುವನ್ನು ತಿಳಿಸಲು ಅಕ್ಟೋಬರ್ 6ರಂದು ನವದೆಹಲಿಗೆ ಹೋಗುವುದಾಗಿ ಭಾನುವಾರ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಕರ್ನಾಟಕ ಚುನಾವಣೆ: ಒಟ್ಟು 375 ಕೋಟಿ ರೂ. ನಗದು, ವಸ್ತು ವಶ; ಕಳೆದ ಬಾರಿಗಿಂತ 4.5 ಪಟ್ಟು ಹೆಚ್ಚಳ!
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನಾ ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ ಮತ್ತು ದಕ್ಷಿಣ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಪ್ರಧಾನಿ ಮೋದಿ, ಕೆಎಸ್ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

