ED inquiry

ಧರ್ಮಸ್ಥಳ ದೇವಸ್ಥಾನ ಆಡಳಿತದ ಅಕ್ರಮ: ED ತನಿಖೆಗೆ ಲಕ್ಷ್ಮೀಶ ತೋಳ್ಪಾಡಿ, ಸಾಮಾಜಿಕ ಕಾರ್ಯಕರ್ತರ ಆಗ್ರಹ
ಈ ಉಲ್ಲಂಘನೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರು ಈ ಹಿಂದೆ ನಿರ್ದೇಶನ ನೀಡಿದ್ದರೂ, ಯಾವುದೇ ತನಿಖೆ ಕೈಗೊಂಡಿಲ್ಲ ಎಂದು ನಾಯಕ್ ಆರೋಪಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಕೇಸು: ಇಡಿ ಮುಂದೆ ವಿಚಾರಣೆಗೆ ಬಿಆರ್ ಎಸ್ ನಾಯಕಿ ಕವಿತಾ ಹಾಜರು
ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರು ಶನಿವಾರ ದೆಹಲಿಯ ಜಾರಿ ನಿರ್ದೇಶನಾಲಯದ ಪ್ರಧಾನ ಕಚೇರಿಗೆ ಆಗಮಿಸಿ ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಮದ್ಯ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡುವಲ್ಲಿ ಅವರ ಪಾತ್ರದ ಕುರಿತು ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಸೋಲಾರ್ ಹಗರಣ ಸಂಬಂಧ ಯಾವ ತನಿಖೆ ಬೇಕಾದರು ಮಾಡಿಸಿ, ತಪ್ಪು ಮಾಡಿದ್ದರೆ ಗಲ್ಲಿಗೇರಿಸಿ: ಡಿ ಕೆ ಶಿವಕುಮಾರ್ ಸವಾಲು
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಭಾರತ ಐಕ್ಯತಾ ಜೋಡೋ ಯಾತ್ರೆಯನ್ನು ಬಿಟ್ಟು ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗೆ ಹಣಕಾಸಿನ ನೆರವು ನೀಡಿದ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ದೆಹಲಿಯಲ್ಲಿ ತಮ್ಮ ಸೋದರ ಡಿ ಕೆ ಸುರೇಶ್ ಜೊತೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

'ನಾವು ನರೇಂದ್ರ ಮೋದಿಗೆ ಹೆದರುವುದಿಲ್ಲ, ನಮ್ಮ ಸತ್ಯಕ್ಕೆ ಅಡ್ಡಗಾಲು ಹಾಕಲು ಅವರಿಂದ ಸಾಧ್ಯವಿಲ್ಲ': ರಾಹುಲ್ ಗಾಂಧಿ
ದೇಶಾದ್ಯಂತ ಸುದ್ದಿಮಾಡಿರುವ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕಂಟಕವಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಲಿಮಿಟೆಡ್ ಕಚೇರಿಗೆ ಜಾರಿ ನಿರ್ದೇಶನಾಲಯ ನಿನ್ನೆ ಬೀಗ ಜಡಿದಿದೆ.

ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಅವರ ಋಣವನ್ನು ನಾವೆಲ್ಲಾ ತೀರಿಸಬೇಕು: ಕೆ ಆರ್ ರಮೇಶ್ ಕುಮಾರ್
ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ನಾವು ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ಹೇಳಿದ್ದಾರೆ.

ಸೋನಿಯಾ ಗಾಂಧಿ ಇಡಿ ವಿಚಾರಣೆ: ಸಂಸತ್ತು ಕಲಾಪದಲ್ಲಿ ಕಾಂಗ್ರೆಸ್ ನಿಂದ ನಿಲುವಳಿ ಸೂಚನೆ ಮಂಡನೆ, ಭಾರೀ ಪ್ರತಿಭಟನೆಗೆ ಸಜ್ಜು
ರಾಷ್ಟ್ರ ರಾಜಧಾನಿಯ ಸಂಸತ್ತು ಒಳಗೆ ಮುಂಗಾರು ಅಧಿವೇಶನದಲ್ಲಿ ಮತ್ತು ಹೊರಗೆ ದೆಹಲಿಯ ಪ್ರಮುಖ ರಾಜಕೀಯ ಚಟುವಟಿಕೆ ಕೇಂದ್ರಗಳಲ್ಲಿ ಇಂದು ಗುರುವಾರ ಪ್ರಮುಖ ಘಟನಾವಳಿಗಳು ನಡೆಯುವ ಸಾಧ್ಯತೆಯಿದೆ. ಕಾರಣ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಇಡಿ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕೇಸು: ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ಸೋನಿಯಾ ಗಾಂಧಿ, ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಮುಂದೆ ಇಂದು ಗುರುವಾರ ವಿಚಾರಣೆಗೆ ಹಾಜರಾಗಲಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಕೇಸು ಮುಗಿದ ಅಧ್ಯಾಯ; ಸತತ 54 ಗಂಟೆ ವಿಚಾರಣೆ ನಡೆಸುವ ಅಗತ್ಯವೇನಿದೆ: ಸಿದ್ದರಾಮಯ್ಯ
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸತತ 50 ಗಂಟೆಗಳಿಗೂ ಅಧಿಕ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕೈ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ: ಹೈದರಾಬಾದ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ನಾಯಕರ ಬಂಧನ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಹಮ್ಮಿಕೊಂಡಿರುವ 'ಚಲೋ ರಾಜಭವನ' ಕರೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

