ED Probe

ನವದೆಹಲಿ: ಎರಡನೇ ಬಾರಿಗೆ ಸೋನಿಯಾ ಗಾಂಧಿ ಇಡಿ ವಿಚಾರಣೆ, ಕಾಂಗ್ರೆಸ್ ಕಚೇರಿ ಬಳಿ ಬಿಗಿ ಭದ್ರತೆ
ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಎರಡನೇ ಬಾರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು: ಫ್ರೀಡಂ ಪಾರ್ಕ್‌ನಿಂದ ರಾಜಭವನದವರೆಗೆ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ತನಿಖೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದಿಂದ ಫ್ರೀಡಂ ಪಾರ್ಕ್ ನಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಪೊಲೀಸರ ಬ್ಯಾರಿಕೇಡ್ ಗೂ ಬಗ್ಗದ ಕಾಂಗ್ರೆಸ್ ಮುಖಂಡರು, ಬ್ಯಾರಿಕೇಡ್ ನೆಗೆದು ಮೆರವಣಿಗೆಯಲ್ಲಿ ಸಾಗಿದರು.

ಸೋನಿಯಾ ಇಡಿ ವಿಚಾರಣೆ ವಿರೋಧಿಸಿ ಪ್ರತಿಭಟನೆ: ಚಿದಂಬರಂ, ಮಾಕೆನ್ ಬಂಧನ, ಕೈ ಕಾರ್ಯಕರ್ತರ ಮೇಲೆ ಜಲ ಫಿರಂಗಿ ಪ್ರಯೋಗ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ. ಚಿದಂಬರಂ, ಅಜಯ್ ಮಾಕೆನ್, ಪವನ್ ಖೇರ್, ಜೈರಾಮ್ ರಮೇಶ್, ವಿವೇಕ್ ಟಂಕಾ, ಅಶೋಕ್ ಗೆಹ್ಲೋಟ್, ಶಶಿ ತರೂರ್ ಮತ್ತಿತರನ್ನು ಬಂಧಿಸಲಾಗಿದೆ.

ಲಲಿತ್ ಮೋದಿಯನ್ನು ಭಾರತಕ್ಕೆ ಬರುವಂತೆ ಏಕೆ ಹೇಳಿಲ್ಲ?: ಕೇಂದ್ರಕ್ಕೆ ಚಿದಂಬರಂ ಪ್ರಶ್ನೆ
ಲಲಿತ್ ಮೋದಿ ವೀಸಾ ಕುರಿತಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ...

