ED

ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಸಿಎಂ ಆಪ್ತ ಕಾರ್ಯದರ್ಶಿ ನಿವಾಸ ಸೇರಿದಂತೆ 10 ಕಡೆಗಳಲ್ಲಿ ಇಡಿ ಶೋಧ!
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ನಿವಾಸ ಸೇರಿದಂತೆ ಸುಮಾರು 10 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಸೋರೆನ್ ರಿಂದ ಎಸ್ಸಿ/ಎಸ್ಟಿ ಕಾಯಿದೆಯಡಿ ಕೇಸ್ ದಾಖಲು: ಹೈಕೋರ್ಟ್ ಮೆಟ್ಟಿಲೇರಿದ ಇಡಿ
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕೇಂದ್ರ ತನಿಖಾ ಸಂಸ್ಥೆ ತಮಗೆ ಮತ್ತು ತಮ್ಮ ಸಮುದಾಯಕ್ಕೆ "ಕಿರುಕುಳ" ನೀಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಎಸ್ಸಿ/ಎಸ್ಟಿ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ.

ಸಮನ್ಸ್ ಸ್ಕಿಪ್ ಮಾಡಿದ ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಇಡಿ
ಈಗ ರದ್ದಾದ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಐದು ಬಾರಿ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್...

ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ: ಸಿಎಂ ಸಿದ್ದರಾಮಯ್ಯ
ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ ನಡೆದ ಇಡಿ ದಾಳಿ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇಡಿಯಿಂದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಬಂಧನ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ವಿಚಾರಣೆಯ ಒತ್ತಡ: ಇಡಿ ಅಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಿಸಿದ ಸೋರೆನ್
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ರಾಂಚಿಯ ಎಸ್ಸಿ/ಎಸ್ಟಿ ಪೊಲೀಸ್ ಠಾಣೆಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ...

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ಗೆ 5ನೇ ಬಾರಿ ಇಡಿ ಸಮನ್ಸ್ ಜಾರಿ
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಐದನೇ ಬಾರಿ...

ಪ್ರತಿಭಟನೆ ಮಧ್ಯೆ, ಇಡಿಯಿಂದ ಜಾರ್ಖಂಡ್ ಸಿಎಂಗೆ ವಿಚಾರಣೆ; 'ಯಾರಿಗೂ ಹೆದರಲ್ಲ' ಎಂದ ಸೋರೆನ್
ಜೆಎಂಎಂ ಕಾರ್ಯಕರ್ತರ ಪ್ರತಿಭಟನೆಯ ನಡುವೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ರಾಂಚಿಯ ಅವರ ನಿವಾಸದಲ್ಲಿ ಸತತ ಏಳು...

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ಗೆ 4ನೇ ಬಾರಿ ಇಡಿ ಸಮನ್ಸ್ ಜಾರಿ
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನಾಲ್ಕನೇ ಬಾರಿ ಸಮನ್ಸ್ ಜಾರಿ...

