education

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಿಕ್ಷಣದ ಬುನಾದಿಯೇ ಅಸ್ಥಿರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ ನಾಳಿನ ಪ್ರಜೆಗಳ ಭವ್ಯ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶನಿವಾರ ಹೇಳಿದ್ದಾರೆ.

ಭಾಷಾ ನ್ಯೂನತೆ ನಿವಾರಿಸಲು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸಹಾಯ, ಎಐ ತಂತ್ರಜ್ಞಾನದಿಂದ ಸಂಶೋಧನೆ: 'ಮನ್ ಕಿ ಬಾತ್' ನಲ್ಲಿ ಪ್ರಧಾನಿ ಮೋದಿ
ಭಾಷಾ ನ್ಯೂನತೆಯಿಂದ ಶಾಲೆಯಿಂದ ಹೊರಗುಳಿದ ಅಥವಾ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿದ ಮಕ್ಕಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ(NEP) ಕಲಿಕೆಯಲ್ಲಿನ ಅಂತಹ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮುಂದಿನ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಹೆಚ್ಚು ಅನುದಾನ: 3 ಸಾವಿರ ಕೆಪಿಎಸ್ ಶಾಲೆ, ಸ್ಪೋಕನ್ ಇಂಗ್ಲಿಷ್ ತರಬೇತಿ
ಈ ಹಿಂದಿನ ಸರ್ಕಾರಗಳು ಉನ್ನತ ಶಿಕ್ಷಣಕ್ಕೆ ಅಲ್ಪಸ್ವಲ್ಪ ಅನುದಾನ ಮೀಸಲಿಟ್ಟಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಮುಂದಿನ ಬಜೆಟ್‌ನಲ್ಲಿ ಅನುದಾನ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವುದಾಗಿ ಸದನಕ್ಕೆ ತಿಳಿಸಿದರು.

ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಕಡಿತ: ವಿದ್ಯಾರ್ಥಿ-ಪೋಷಕರಲ್ಲಿ ಆತಂಕ
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಕಡಿತಗೊಳಿಸುವುದಾಗಿ ಸರ್ಕಾರ ಇತ್ತೀಚೆಗೆ ತಿಳಿಸಿತ್ತು. ಕಾರ್ಮಿಕ ಇಲಾಖೆಯು ಸಾಕಷ್ಟು ಹಣದ ಕೊರತೆ ಎದುರಿಸುತ್ತಿದೆ ಎಂದು ಸರ್ಕಾರ ಇದಕ್ಕೆ ಕಾರಣ ನೀಡಿದ್ದು, ವಿದ್ಯಾರ್ಥಿಗಳು ಮತ್ತು ತಜ್ಞರು ಸರ್ಕಾರದ ಕ್ರಮಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಧಾರವಾಡ: ಪ್ರಚಾರದ ಹುಚ್ಚಿಲ್ಲದೆ ಸಹಾಯ; ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ನೆರವು
ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಿಚ್‌ಗಳಲ್ಲಿ ದೊಡ್ಡ ಮೊತ್ತದ ರನ್ ಗಳಿಸುವುದು ಮಾತ್ರವಲ್ಲ, ಮೈದಾನದ ಹೊರಗೆ ಅವರ ಹೃದಯ ವೈಶಾಲ್ಯತೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರಾಮರಾಜ್ಯ ಅಂದರೆ ಹೇಗಿರಬೇಕು ಗೊತ್ತಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದೇನು?
ರಾಮರಾಜ್ಯವನ್ನು ಯಾರಾದರೂ ಊಹಿಸಿಕೊಂಡರೆ, ಅದು ಎಲ್ಲರಿಗೂ ಉತ್ತಮ ಮತ್ತು ಉಚಿತ ಶಿಕ್ಷಣ ಹಾಗೂ ಆರೋಗ್ಯವನ್ನು ಹೊಂದಿರಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

'ಕೆಪಿಎಸ್'ನಿಂದ ಕರ್ನಾಟಕದಲ್ಲಿ ಸಾರ್ವಜನಿಕ ಶಿಕ್ಷಣ ಬದಲಾವಣೆ ಸಾಧ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ (ಸಂದರ್ಶನ)
ಶಾಲೆಗಳ ಸಮೂಹ (Clustering of Schools) ಮಾಡುವುದು ಕರ್ನಾಟಕದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಪರಿವರ್ತಿಸಲು ಸಹಾಯ ಮಾಡುತ್ತದೆ. ಅತ್ಯಲ್ಪ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿರುವ ಅನೇಕ ಶಾಲೆಗಳು ಕರ್ನಾಟಕದಲ್ಲಿವೆ.

ಮೆಕಾಲೆ ಶಿಕ್ಷಣ ವ್ಯವಸ್ಥೆ ಉದಾರೀಕರಣಗೊಳಿಸದಿದ್ದರೆ ಸನಾತನವಾದಿಗಳ ಮನೆಯಲ್ಲಿ ಗುಲಾಮನಾಗಿರುತ್ತಿದ್ದೆ ಎಂದಿದ್ದರು ಕುವೆಂಪು: ಮಹಾದೇವಪ್ಪ
ಬ್ರಿಟಿಷರು ದೇಶಕ್ಕೆ ದೊಡ್ಡ ಹಾನಿಯುಂಟು ಮಾಡಿದ್ದರೂ, ಲಾರ್ಡ್ ಮೆಕಾಲೆ ಅವರ ಶಿಕ್ಷಣ ವ್ಯವಸ್ಥೆಯ ಉದಾರೀಕರಣವು ಶೂದ್ರರಿಗೆ ಶಿಕ್ಷಣ ಪಡೆಯಲು ಸಹಾಯ ಮಾಡಿತು ಎಂದು ಅವರು ಹೇಳಿದರು. ಈ ಶಿಕ್ಷಣ ಉದಾರೀಕರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಉನ್ನತ ಶಿಕ್ಷಣ ಪಡೆಯುವ ಅವಕಾಶ ದೊರೆಯಿತು ಎಂದರು.

ಬ್ರ್ಯಾಂಡ್ ಬೆಂಗಳೂರು: 'ಶೈಕ್ಷಣಿಕ ಬೆಂಗಳೂರು'ಗಾಗಿ ನಾಗರೀಕರಿಂದ ಸಲಹೆ, ಅಭಿಪ್ರಾಯ ಸಂಗ್ರಹ
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಶೈಕ್ಷಣಿಕ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಸಭೆ ಬಿಬಿಎಂಪಿ ಕೇಂದ್ರ ಕಚೇರ ಆವರಣದಲ್ಲಿ ಸೋಮವಾರ ನಡೆಯಿತು. ಈ ವೇಳೆ ಮಹತ್ವದ ಸಲಹೆಗಳನ್ನು ಸ್ವೀಕರಿಸಲಾಯಿತು.

