ದೇಶಮಹಾರಾಷ್ಟ್ರ ಬಿಕ್ಕಟ್ಟು: ಏಕನಾಥ್ ಶಿಂಧೆ ಟೀಂನ ಅನರ್ಹತೆ ನೊಟೀಸ್, ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಇಂದು
ಮಹಾರಾಷ್ಟ್ರ ಸರ್ಕಾರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯ ನಾಯಕ ಏಕನಾಥ್ ಶಿಂಧೆ ಸೇರಿದಂತೆ 16 ಮಂದಿಗೆ ಉಪ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದರೊಂದಿಗೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಅಧಿಕಾರದ ಹೋರಾಟ ಸುಪ್ರೀಂ ಕೋರ್ಟ್ ಅಂಗಳಕ್ಕೆ ಬಂದು ತಲುಪಿದೆ.