election campaign

ಲೋಕಸಭಾ ಚುನಾವಣೆ 2024: ರಾಜ್ಯದಲ್ಲಿ ಏಪ್ರಿಲ್ 24ರಿಂದ ಚುನಾವಣಾ ಪ್ರಚಾರ, ಚುನಾವಣೋತ್ತರ ಸಮೀಕ್ಷೆ ನಿಷೇಧ
ಕರ್ನಾಟಕದಲ್ಲಿ ಏಪ್ರಿಲ್ 26 ರಂದು ನಡೆಯಲಿರುವ 2ನೇ ಹಂತದ ಲೋಕಸಭಾ ಚುನಾವಣೆಯ ಮತದಾನಕ್ಕೆ 48 ಗಂಟೆಗಳ ಮೊದಲು ಅಂದರೆ ಏಪ್ರಿಲ್ 24 ರಿಂದ ರಾಜಕೀಯ ಪ್ರಚಾರ ಮತ್ತು ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಸಾವು
ಬೆಂಗಳೂರು ಸೆಂಟ್ರಲ್ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರ ಪರ ಪ್ರಚಾರ ನಡೆಸುವ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಘಟನೆ ಜೆಸಿ ನಗರದ ಪಾಳ್ಯ ಮುಖ್ಯರಸ್ತೆಯಲ್ಲಿ ಬುಧವಾರ ಸಂಜೆ 4:15ರ ಸುಮಾರಿಗೆ ನಡೆದಿದೆ.

ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ನಾಳೆ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ
ಲೋಕಸಭಾ ಚುನಾವಣೆ ಪ್ರಚಾರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗತೊಡಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು ) ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಬುದ್ಧಿ ಹೇಳುವಷ್ಟು ಸಿದ್ದರಾಮಯ್ಯ ದೊಡ್ಡವರಲ್ಲ: ಬಸವರಾಜ ಬೊಮ್ಮಾಯಿ
ಚುನಾವಣಾ ಪ್ರಚಾರದ ವೇಳೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಗುರಿಯಾಗಿಸಿಕೊಂಡು ತೀರಾ ವೈಯಕ್ತಿಕವಾಗಿ ಟೀಕೆಗಳನ್ನು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿಗೆ ಸಲಹೆ ನೀಡುವಷ್ಟು ಸಿದ್ದರಾಮಯ್ಯ ಅವರು ದೊಡ್ಡ ನಾಯಕರಲ್ಲ ಎಂದಿದ್ದಾರೆ.

ಹಾಸನದಲ್ಲಿ NDA ಅಭ್ಯರ್ಥಿ ಪರ ಪ್ರೀತಂ ಗೌಡ ಪ್ರಚಾರ; ಪ್ರಜ್ವಲ್ ರೇವಣ್ಣ ಹೆಸರೇಳದೆಯೇ ಮತಯಾಚನೆ!
ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬುಧವಾರ ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಆದರೆ, ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಹೆಸರೇಳದೆಯೇ ಮೋದಿ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸುವ ಮೂಲಕ ಮತಯಾಚಿಸಿದ್ದಾರೆ.

ಮಂಗಳೂರು: ಅಬ್ಬರದ ಪ್ರಚಾರಕ್ಕೆ ಅಡ್ಡಿಯಾದ ತಾಪಮಾನ; ಬಿಸಿಲ ಧಗೆಗೆ ಜನ ಸುಸ್ತೋ ಸುಸ್ತು!
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿದ ಧಗೆ ಹೆಚ್ಚಾಗುತ್ತಿದ್ದು, ಬಿಸಿಲ ತಾಪ ಮಿತಿ ಮೀರುತ್ತಿರುವ ಪರಿಣಾಮ ಚುನಾವಣಾ ಪ್ರಚಾರದ ಮೇಲೂ ಬಿದ್ದಿದೆ. ಹೆಚ್ಚುತ್ತಿರುವ ತಾಪಮಾನ ಬಹಿರಂಗ ಪ್ರಚಾರಕ್ಕಿಳಿದಿರುವ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Lok Sabha Elections 2024: ಪ್ರಚಾರದಲ್ಲಿ ಪ್ರಧಾನಿ ಮೋದಿ ಫೋಟೊ ಬಳಕೆ; ಕೋರ್ಟ್ ಮೊರೆ ಹೋದ ಕೆ.ಎಸ್. ಈಶ್ವರಪ್ಪ
ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿನ ಕೆಎಸ್. ಈಶ್ವರಪ್ಪ ಬಂಡಾಯ ಇದೀಗ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ ವಿಚಾರ...

ಖರ್ಗೆ ತವರು ಕ್ಷೇತ್ರದಿಂದಲೇ ಪ್ರಧಾನಿ ಮೋದಿ ನಾಳೆಯಿಂದ ಲೋಕಸಭಾ ಚುನಾವಣಾ ಪ್ರಚಾರ ಆರಂಭ!
ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ (ಶನಿವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿಯಿಂದಲೇ ರಾಜ್ಯದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಔಪಚಾರಿಕವಾಗಿ ಚಾಲನೆ ನೀಡಲಿದ್ದಾರೆ.

2024 ಲೋಕಸಭಾ ಚುನಾವಣೆ: ಎಎಪಿ ಪ್ರಚಾರಕ್ಕೆ ಚಾಲನೆ ನೀಡಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್
ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಶುಕ್ರವಾರ ಇಲ್ಲಿ ಪಕ್ಷದ ಲೋಕಸಭಾ ಚುನಾವಣಾ ಪ್ರಚಾರವನ್ನು 'ಸಂಸದ್ ಮೇ ಭಿ ಕೇಜ್ರಿವಾಲ್, ತೋ ದಿಲ್ಲಿ ಹೋಗಿ ಔರ್ ಖುಷ್ ಹಾಲ್' ಎಂಬ ಘೋಷಣೆಯೊಂದಿಗೆ ಪ್ರಾರಂಭಿಸಿದರು.

